ವಾರಾಣಸಿ: ದೇಶೀ ನಿರ್ಮಿತ ವೇಗದ ರೈಲು ‘ವಂದೇ ಭಾರತ ಎಕ್ಸ್‌ಪ್ರೆಸ್’ ಕುರಿತು ಲೇವಡಿ ಮಾಡಿದ ವಿರೋಧ ಪಕ್ಷಗಳ ನಾಯಕರನ್ನು ಪ್ರಧಾನಿ ನರೇಂದ್ರ ಮೋದಿ ತರಾಟೆಗೆ ತೆಗೆದುಕೊಂಡಿದ್ದಾರೆ.
ವಂದೇ ಭಾರತ ಎಕ್ಸ್‌ಪ್ರೆಸ್ ಬಗ್ಗೆ ಅಣಕಿಸುವ ಮೂಲಕ ವಿರೋಧ ಪಕ್ಷಗಳ ನಾಯಕರು ಅದಕ್ಕಾಗಿ ದುಡಿದ ಎಂಜಿನಿಯರ್ ಮತ್ತು ತಂತ್ರಜ್ಞರನ್ನು ಅವಮಾನಿಸಿದ್ದಾರೆ ಎಂದು ಹೇಳಿದ್ದಾರೆ.
ಮೊದಲ ದಿನ ವಾರಾಣಸಿಯಿಂದ ದೆಹಲಿಗೆ ಹಿಂದಿರುಗುತ್ತಿದ್ದ ವೇಳೆ ತಾಂತ್ರಿಕ ದೋಷದಿಂದ ರೈಲು ಮೂರು ಬಾರಿ ನಿಂತಿತ್ತು. ಇದನ್ನು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಮತ್ತು ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್ ಟೀಕೆ ಮಾಡಿದ್ದರು.
ಮಂಗಳವಾರ ಸಾರ್ವಜನಿಕ ರ‍್ಯಾಲಿಯಲ್ಲಿ ಮಾತನಾಡುತ್ತಿದ್ದ ಅವರು, ಸ್ಥೈರ್ಯ ಕುಸಿಯುವಂತೆ ಮಾಡುವ ಇಂತಹ ನಕಾರಾತ್ಮಕ ಹೇಳಿಕೆಗಳಿಗೆ ಕಿವಿಗೊಡದಂತೆ ಅವರು ಜನರಿಗೆ ಮನವಿ ಮಾಡಿದರು.
27ರಂದು ಅಮೇಠಿಗೆ ಪ್ರಧಾನಿ:
ಅಮೇಠಿ/ಉತ್ತರ ಪ್ರದೇಶ: ಪ್ರಧಾನಿ ನರೇಂದ್ರ ಮೋದಿ ಇದೇ 27ರಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ತವರು ಕ್ಷೇತ್ರ ಅಮೇಠಿ ಕ್ಷೇತ್ರಕ್ಕೆ ಭೇಟಿ ನೀಡಲಿದ್ದಾರೆ.ಮುನ್ಶಿಗಂಜ್‌ನಲ್ಲಿ ಬಿಜೆಪಿ ರ‍್ಯಾಲಿಯನ್ನು ಉದ್ದೇಶಿಸಿ ಅವರು ಮಾತನಾಡಲಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.