ಭಾನುವಾರ, ಡಿಸೆಂಬರ್ 15, 2019
25 °C
ನ್ಯಾಷನಲ್‌ ಹೆರಾಲ್ಡ್‌

ಐಟಿ ವಿವರ ಪರಿಶೀಲನೆಗೆ ಒಪ್ಪಿಗೆ: ರಾಹುಲ್‌, ಸೋನಿಯಾಗೆ ಸಂಕಷ್ಟ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ಮತ್ತು ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ ವಿರುದ್ಧದ ‘ನ್ಯಾಷನಲ್‌ ಹೆರಾಲ್ಡ್‌’ ಆದಾಯ ತೆರಿಗೆ ವಂಚನೆ ಪ್ರಕರಣದ ಅಂತಿಮ ವಿಚಾರಣೆಯನ್ನು ಸುಪ್ರೀಂ ಕೋರ್ಟ್‌ ಮಂಗಳವಾರ ಕೈಗೆತ್ತಿಕೊಂಡಿದೆ.

ರಾಹುಲ್‌ ಮತ್ತು ಸೋನಿಯಾ ಗಾಂಧಿ ಅವರ 2011–12ನೇ ಸಾಲಿನಲ್ಲಿ ಪಾವತಿಸಿದ ಆದಾಯ ತೆರಿಗೆ ಲೆಕ್ಕಪತ್ರ ವಿವರಗಳ ಪುನರ್‌ ಪರಿಶೀಲನೆಗೆ ಸುಪ್ರೀಂಕೋರ್ಟ್‌ ಒಪ್ಪಿಗೆ ಸೂಚಿಸಿದೆ.

ಆದರೆ, ಪ್ರಕರಣ ನ್ಯಾಯಾಲಯದಲ್ಲಿ ಇತ್ಯರ್ಥವಾಗದ ಹೊರತು ಇಬ್ಬರ ವಿರುದ್ಧ ಯಾವುದೇ ಕ್ರಮ ಜರುಗಿಸದಂತೆ ಆದಾಯ ತೆರಿಗೆ ಇಲಾಖೆಗೆ ತಾಕೀತು ಮಾಡಿದೆ. 

ಆದಾಯ ತೆರಿಗೆ ವಿವರಗಳ ಪುನರ್‌ ಪರಿಶೀಲನೆಗೆ ಒಪ್ಪಿಗೆ ನೀಡಿದ್ದ ದೆಹಲಿ ಹೈಕೋರ್ಟ್‌ ಆದೇಶ ಪ್ರಶ್ನಿಸಿ ಇಬ್ಬರೂ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ್ದರು. ತೆರಿಗೆ ಇಲಾಖೆ ಕೇವಿಯಟ್‌ ಸಲ್ಲಿಸಿತ್ತು.

ಇಬ್ಬರ ಅರ್ಜಿಗಳ ಅರ್ಹತೆಯ ಬಗ್ಗೆ ಅಭಿಪ್ರಾಯ ವ್ಯಕ್ತಪಡಿಸಲು ನಿರಾಕರಿಸಿದ ನ್ಯಾಯಮೂರ್ತಿ ಎ.ಕೆ. ಸಿಕ್ರಿ ನೇತೃತ್ವದ ನ್ಯಾಯಪೀಠವು ವಿಚಾರಣೆಯನ್ನು ಜನವರಿ 8ಕ್ಕೆ ಮುಂದೂಡಿದೆ.

‘ನ್ಯಾಷನಲ್‌ ಹೆರಾಲ್ಡ್‌’ ಪರಭಾರೆಯಲ್ಲಿ ಭಾರಿ ತೆರಿಗೆ ವಂಚನೆ ನಡೆದಿದೆ ಎಂದು ಬಿಜೆಪಿ ರಾಜ್ಯಸಭಾ ಸದಸ್ಯ ಸುಬ್ರಮಣಿಯನ್‌ ಸ್ವಾಮಿ ಅವರು ಸೋನಿಯಾ, ರಾಹುಲ್‌ ಮತ್ತು ಕಾಂಗ್ರೆಸ್‌ ನಾಯಕ ಆಸ್ಕರ್‌ ಫರ್ನಾಂಡಿಸ್‌ ವಿರುದ್ಧ ವಿಚಾರಣಾ ಹಂತದ ನ್ಯಾಯಾಲಯದಲ್ಲಿ ಕ್ರಿಮಿನಲ್‌ ಮೊಕದ್ದಮೆ ದಾಖಲಿಸಿದ್ದರು. ಸದ್ಯ ಮೂವರು ನಾಯಕರು ಜಾಮೀನು ಪಡೆದಿದ್ದಾರೆ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು