ಎಜೆಎಲ್‌ ಕಟ್ಟಡ ತೆರವು ಪ್ರಕರಣ: ಹೈಕೋರ್ಟ್‌ ಆದೇಶಕ್ಕೆ ‘ಸುಪ್ರೀಂ’ ತಡೆ

ಶನಿವಾರ, ಏಪ್ರಿಲ್ 20, 2019
29 °C
ನ್ಯಾಷನಲ್‌ ಹೆರಾಲ್ಡ್‌ ಪ್ರಕಾಶನ ಸಂಸ್ಥೆ

ಎಜೆಎಲ್‌ ಕಟ್ಟಡ ತೆರವು ಪ್ರಕರಣ: ಹೈಕೋರ್ಟ್‌ ಆದೇಶಕ್ಕೆ ‘ಸುಪ್ರೀಂ’ ತಡೆ

Published:
Updated:
Prajavani

ನವದೆಹಲಿ: ನ್ಯಾಷನಲ್‌ ಹೆರಾಲ್ಡ್‌ ಪ್ರಕಾಶನ ಸಂಸ್ಥೆ ಅಸೋಸಿಯೇಟ್‌ ಜರ್ನಲ್‌(ಎಜೆಎಲ್‌) ಇಲ್ಲಿನ ಹೆರಾಲ್ಡ್‌ ಹೌಸ್‌ನಿಂದ ತೆರವುಗೊಳ್ಳಬೇಕು ಎಂದು ದೆಹಲಿ ಹೈಕೋರ್ಟ್‌ ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್‌ ಶುಕ್ರವಾರ ತಡೆ ನೀಡಿದೆ.   

ಮುಖ್ಯ ನ್ಯಾಯಮೂರ್ತಿ ರಂಜನ್‌ ಗೋಗೊಯಿ ಅವರನ್ನು ಒಳಗೊಂಡಿದ್ದ ಪೀಠವು ಎಜೆಎಲ್‌ ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ಭೂಮಿ ಮತ್ತು ಅಭಿವೃದ್ಧಿ ಅಧಿಕಾರಿಗೆ ನೋಟಿಸ್‌ ಜಾರಿ ಮಾಡಿತು. 

ಹೈಕೋರ್ಟ್‌ ಆದೇಶವನ್ನು ರದ್ದುಪಡಿಸಬೇಕು ಎಂದು ಕೋರಿ ಎಜೆಎಲ್‌ ಸುಪ್ರೀಂ ಕೋರ್ಟ್‌ ಮೊರೆ ಹೋಗಿತ್ತು. ರಾಜಧಾನಿಯ ಹೃದಯ ಭಾಗದಲ್ಲಿನ ಐಟಿಒ ಪ್ರದೇಶದಲ್ಲಿರುವ ಹೆರಾಲ್ಡ್‌ ಹೌಸ್‌ ಅನ್ನು ತೆರವು ಮಾಡುವಲ್ಲಿ ದಬ್ಬಾಳಿಕೆಯ ಕ್ರಮಗಳನ್ನು ಕೈಗೊಳ್ಳಬಾರದು ಎಂದು ಅರ್ಜಿಯಲ್ಲಿ ಮನವಿ ಮಾಡಲಾಗಿತ್ತು.

ಕಾಂಗ್ರೆಸ್ ಅಧ್ಯಕ್ಷ ರಾಹುಲ್‌ ಗಾಂಧಿ ಮತ್ತು ಇವರ ತಾಯಿ ಸೋನಿಯಾ ಗಾಂಧಿ ಅವರು ಪ್ರಮುಖ ಪಾಲುದಾರರಾಗಿರುವ ಯಂಗ್ ಇಂಡಿಯಾ ಕಂಪನಿಗೆ ಎಜೆಎಲ್‌ ಷೇರುಗಳನ್ನು ವರ್ಗಾಯಿಸುವ ಪ್ರಕ್ರಿಯೆಯಲ್ಲಿ ಅಕ್ರಮ ಎಸಗಲಾಗಿದೆ ಮತ್ತು  ಇದರಲ್ಲಿ ಯಂಗ್‌ ಇಂಡಿಯಾದ ಹಿತಾಸಕ್ತಿಗೆ ಅನುಗುಣವಾಗಿ ಮಾಡಲಾಗಿದೆ ಎಂದು ಹೈಕೋರ್ಟ್‌ ಹೇಳಿತ್ತು.

ಎಜೆಎಲ್ ಅರ್ಜಿಯನ್ನು ಫೆ.28 ರಂದು ತಳ್ಳಿ ಹಾಕಿದ್ದ ಹೈಕೋರ್ಟ್‌, ಗುತ್ತಿಗೆ ಷರತ್ತುಗಳನ್ನು ದುರ್ಬಳಕೆ ಮಾಡಿಕೊಳ್ಳಲಾಗಿದೆ ಎಂದು ಹೇಳಿತ್ತು. 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !