ಬುಧವಾರ, ಡಿಸೆಂಬರ್ 8, 2021
19 °C

ರಾಷ್ಟ್ರೀಯ ಹೆದ್ದಾರಿ: ಡಿಸೆಂಬರ್‌ನಿಂದ ‘ಫಾಸ್ಟ್ಯಾಗ್‌’ ಕಡ್ಡಾಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ: ‘ರಾಷ್ಟ್ರೀಯ ಹೆದ್ದಾರಿಯ ಟೋಲ್‌ ಕೇಂದ್ರಗಳ ಎಲ್ಲಾ ಲೇನ್‌ಗಳನ್ನು ಪೂರ್ಣ ಪ್ರಮಾಣದಲ್ಲಿ ‘ಫಾಸ್ಟ್ಯಾಗ್‌ ಲೇನ್‌’ಗಳಾಗಿ ಪರಿವರ್ತಿಸಲು ನಿರ್ಧರಿಸಲಾಗಿದೆ’ ಎಂದು ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಸಚಿವಾಲಯ ತಿಳಿಸಿದೆ.

‘ಟೋಲ್‌ ಕೇಂದ್ರಗಳಲ್ಲಿ ವಾಹನ ದಟ್ಟಣೆಯಾಗುವುದನ್ನು ತಪ್ಪಿಸಲು ಈ ನಿರ್ಧಾರ ಕೈಗೊಳ್ಳಲಾಗಿದ್ದು, ಡಿಸೆಂಬರ್‌ 1ರ ಬಳಿಕ ಫಾಸ್ಟ್ಯಾಗ್‌ ರಹಿತ ವಾಹನಗಳು ಎರಡು ಪಟ್ಟು ಶುಲ್ಕ ನೀಡಬೇಕಾಗುತ್ತದೆ’ ಎಂದು ಸಚಿವಾಲಯದ ಪ್ರಕಟಣೆ ತಿಳಿಸಿದೆ.

ಅತಿ ದೊಡ್ಡ ವಾಹನಗಳಿಗಾಗಿ ಪ್ರತಿ ಕೇಂದ್ರದಲ್ಲಿ ಒಂದು ‘ಹೈಬ್ರಿಡ್‌ ಲೇನ್‌’ ಸ್ಥಾಪಿಸಲಾಗುವುದು. ಮುಂದಿನ ದಿನಗಳಲ್ಲಿ ಇವುಗಳನ್ನೂ ಫಾಸ್ಟ್ಯಾಗ್‌ ಲೇನ್‌ಗಳಾಗಿ ಪರಿವರ್ತಿಸಲಾಗುವುದು’ ಎಂದು ಪ್ರಕಟಣೆ ತಿಳಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು