ಗುರುವಾರ , ಜನವರಿ 23, 2020
26 °C

ವಿರಳ ಕಾಯಿಲೆಗಳ ಚಿಕಿತ್ಸೆಗೆ ಹೊಸ ನೀತಿ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ : ಅಪರೂಪದ ಕಾಯಿಲೆಗಳಿಂದ ಬಳಲುತ್ತಿರುವವರಿಗಾಗಿ ರಾಷ್ಟ್ರೀಯ ಆರೋಗ್ಯ ನಿಧಿ ಯೋಜನೆ ಅಡಿ ₹ 15 ಲಕ್ಷದವರೆಗೆ ಹಣಕಾಸು ನೆರವನ್ನು ಕೇಂದ್ರ ಸರ್ಕಾರ ನೀಡಲಿದೆ. ಈ ಕುರಿತು ನೂತನ ನೀತಿಯ ಕರಡನ್ನು ಸಿದ್ಧಪಡಿಸಿದೆ.

ವೈದ್ಯಕೀಯ ವಿಜ್ಞಾನಕ್ಕೆ ಸವಾಲಾಗಿರುವ ಕಾಯಿಲೆಗಳ ವಿರುದ್ಧ ಹೋರಾಡುತ್ತಿರುವವರ ಚಿಕಿತ್ಸೆಗಾಗಿ ‘ವಿರಳ ಕಾಯಿಲೆಗಳ ರಾಷ್ಟ್ರೀಯ ನೀತಿ’ ಕರಡನ್ನು ಬಿಡುಗಡೆ ಮಾಡಿದ್ದು, ಬಡತನ ರೇಖೆಗಿಂತ ಕೆಳಗಿರುವ (ಬಿಪಿಎಲ್‌) ಕಾರ್ಡುದಾರರು ಸೌಲಭ್ಯ ಪಡೆಯಬಹುದು ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು