ಗುರುವಾರ , ಫೆಬ್ರವರಿ 27, 2020
19 °C

ದೆಹಲಿ ಚುನಾವಣೆ: ಸ್ಟಾರ್ ಪ್ರಚಾರಕರ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್

ಏಜೆನ್ಸೀಸ್ Updated:

ಅಕ್ಷರ ಗಾತ್ರ : | |

prajavani

ನವದೆಹಲಿ: ಮುಂಬರುವ ತಿಂಗಳಲ್ಲಿ ನಡೆಯಲಿರುವ ದೆಹಲಿ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಸ್ಟಾರ್ ಪ್ರಚಾರಕರ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕ ಗಾಂಧಿ ವಾದ್ರಾ ಮತ್ತು ಮಾಜಿ ಪ್ರಧಾನಿ ಮನಮೋಹನ್ ಸಿಂಗ್  ಸೇರಿದಂತೆ 40 ಜನರು ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ.

ಸಕ್ರಿಯ ರಾಜಕಾರಣದಿಂದ ದೂರವುಳಿದಿದ್ದ ಮಾಜಿ ಕ್ರಿಕೆಟ್ ಆಟಗಾರ ಹಾಗೂ  ರಾಜಕಾರಣಿ ನವಜೋತ್ ಸಿಂಗ್ ಸಿಧು ಪಟ್ಟಿಯಲ್ಲಿ ಸ್ಥಾನ ಪಡೆದಿರುವುದು ಆಶ್ಚರ್ಯಕ್ಕೆ ಕಾರಣವಾಗಿದೆ. ಕಳೆದ ವರ್ಷ ನಡೆದ ಹರಿಯಾಣ ವಿಧಾನಸಭೆ ಚುನಾವಣೆಯಲ್ಲಿ ಸ್ಟಾರ್ ಪ್ರಚಾರಕರ ಪಟ್ಟಿಯಿಂದ ಸಿಧುವನ್ನು ಹೊರಗಿಡಲಾಗಿತ್ತು. 

ಕಳೆದ ವರ್ಷ ಜುಲೈನಲ್ಲಿ ಪಂಜಾಬ್ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಅವರೊಂದಿಗಿನ ಭಿನ್ನಾಭಿಪ್ರಾಯದಿಂದಾಗಿ ಸಿಧು ಸಂಪುಟವನ್ನು ತೊರೆದಿದ್ದರು.  ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮಕ್ಕೆ ಹೋಗಿದ್ದ ಸಿಧು ಅಲ್ಲಿನ ಸೇನಾ ಮುಖ್ಯಸ್ಥರನ್ನು ಅಪ್ಪಿಕೊಂಡು ವಿವಾದ ಸೃಷ್ಟಿಯಾದ ಬಳಿಕ ಕ್ಯಾಪ್ಟನ್ ಅಮರಿಂದರ್ ಸಿಂಗ್ ಹಾಗೂ ನವಜೋತ್ ಸಿಂಗ್ ಸಿಧು ನಡುವೆ ಮನಸ್ತಾಪ ಬೆಳೆದಿತ್ತು.

ಕಾಂಗ್ರೆಸ್ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳಾದ ಅಮರಿಂದರ್ ಸಿಂಗ್, ಭೂಪೇಶ್ ಬಘೇಲ್, ಅಶೋಕ್ ಗೆಹ್ಲೋಟ್, ಕಮಲ್ ನಾಥ್, ವಿ. ನಾರಾಯಣಸ್ವಾಮಿ ಕೂಡ ದೆಹಲಿ ವಿಧಾನಸಭೆ ಚುನಾವಣೆಯ ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ.

ಕಾಂಗ್ರೆಸ್ ಸಂಸದ ಶಶಿ ತರೂರ್ ಸೇರಿದಂತೆ ಸಚಿನ್ ಪೈಲಟ್, ಜ್ಯೋತಿರಾದಿತ್ಯ ಸಿಂಧಿಯ ಮತ್ತು ರಂದೀಪ್ ಸುರ್ಜೇವಾಲಾ ಪಟ್ಟಿಯಲ್ಲಿದ್ದಾರೆ. ಅಲ್ಲದೆ ಮಾಜಿ ರಾಷ್ಟ್ರಪತಿ ಪ್ರಣಬ್ ಮುರ್ಜಿ ಅವರ ಪುತ್ರಿ ಶರ್ಮಿಷ್ಟ ಮುಖರ್ಜಿ, ಸಿನಿಮಾ ನಟರು ಹಾಗು ರಾಜಕಾರಣಿಗಳಾಗಿರುವ ರಾಜ್ ಬಬ್ಬರ್, ಶತೃಘ್ನ ಸಿನ್ಹಾ, ಖುಷ್ಬು ಸುಂದರ್ ಮತ್ತು ನಗ್ಮಾ ಸ್ಟಾರ್ ಪ್ರಚಾರಕರಾಗಿದ್ದಾರೆ.

70 ವಿಧಾನಸಭಾ ಕ್ಷೇತ್ರಗಳ ಪೈಕಿ ಕಾಂಗ್ರೆಸ್ 66 ಕ್ಷೇತ್ರಗಳಲ್ಲಿ ಸ್ಪರ್ಧಿಸುತ್ತಿದೆ. ಶೀಲಾ ದೀಕ್ಷಿತ್ ಅವರ ನೇತೃತ್ವದಲ್ಲಿ ಪಕ್ಷ ಮೂರು ಅವಧಿಗೆ ದೆಹಲಿಯಲ್ಲಿ ಆಡಳಿತ ನಡೆಸಿದ್ದರೂ ಕೂಡ ಕಳೆದ ಬಾರಿ ಮುಗ್ಗರಿಸಿತ್ತು. 
ದೆಹಲಿ ಚುನಾವಣೆಗೆ ಫೆಬ್ರವರಿ 8ರಂದು ಮತದಾನ ನಡೆಯಲಿದ್ದು, ಫೆ. 11ರಂದು ಫಲಿತಾಂಶ ಪ್ರಕಟವಾಗಲಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು