ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎನ್‌ಸಿ–ಕಾಂಗ್ರೆಸ್‌ ಮೈತ್ರಿ

Last Updated 20 ಮಾರ್ಚ್ 2019, 17:35 IST
ಅಕ್ಷರ ಗಾತ್ರ

ಶ್ರೀನಗರ: ನ್ಯಾಷನಲ್‌ ಕಾನ್ಫರೆನ್ಸ್‌ (ಎನ್‌ಸಿ) ಹಾಗೂ ಕಾಂಗ್ರೆಸ್‌ ಪಕ್ಷಗಳು ಜಮ್ಮು ಕಾಶ್ಮೀರದಲ್ಲಿ ಚುನಾವಣಾಪೂರ್ವ ಸೀಟು ಹೊಂದಾಣಿಕೆಗೆ ಅಂತಿಮ ರೂಪ ನೀಡಿವೆ.

ರಾಜ್ಯದ ಒಟ್ಟು ಆರು ಲೋಕಸಭಾ ಕ್ಷೇತ್ರಗಳಲ್ಲಿ ಮೂರು ಕ್ಷೇತ್ರಗಳಿಗೆ ಮಾತ್ರ ಸೀಟು ಹೊಂದಾಣಿಕೆ ಮಾಡಲಾಗಿದ್ದು, ಉಳಿದ ಮೂರು ಕ್ಷೇತ್ರಗಳಲ್ಲಿ ಎರಡೂ ಪಕ್ಷಗಳು ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿವೆ. ಕಾಂಗ್ರೆಸ್‌ ಮುಖಂಡ ಗುಲಾಂ ನಬಿ ಆಜಾದ್‌ ಹಾಗೂ ಎನ್‌ಸಿ ಅಧ್ಯಕ್ಷ ಫಾರೂಕ್‌ ಅಬ್ದುಲ್ಲಾ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದರು.

‘ರಾಜ್ಯಕ್ಕೆ ಪಾಕಿಸ್ತಾನದಿಂದ ಬೆದರಿಕೆ ಇದೆ. ಇದನ್ನು ಮನಗಂಡು ಕೋಮುವಾದಿ ಶಕ್ತಿಗಳನ್ನು ದೂರವಿಟ್ಟು ದೇಶದ ಹಿತ ಕಾಪಾಡುವ ಉದ್ದೇಶದಿಂದ ಸೀಟು ಹೊಂದಾಣಿಕೆ ಮಾಡಿಕೊಳ್ಳಲಾಗಿದೆ’ ಎಂದು ಆಜಾದ್‌ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT