ಮಧ್ಯ ಪ್ರದೇಶ ಚುನಾವಣೆ: 200 ಕ್ಷೇತ್ರಗಳಲ್ಲಿ ಸ್ಪರ್ಧಿಸುವುದಾಗಿ ಎನ್‌ಸಿಪಿ ಘೋಷಣೆ

6
ರೈತರಿಗೆ ಉಚಿತ ವಿದ್ಯುತ್, ಪೆಟ್ರೋಲ್ ಮತ್ತು ಡೀಸೆಲ್ ಜಿಎಸ್‌ಟಿ ವ್ಯಾಪ್ತಿಗೆ ತರುವುದಾಗಿ ಪ್ರಣಾಳಿಕೆಯಲ್ಲಿ ಭರವಸೆ

ಮಧ್ಯ ಪ್ರದೇಶ ಚುನಾವಣೆ: 200 ಕ್ಷೇತ್ರಗಳಲ್ಲಿ ಸ್ಪರ್ಧಿಸುವುದಾಗಿ ಎನ್‌ಸಿಪಿ ಘೋಷಣೆ

Published:
Updated:

ಭೋಪಾಲ್: ಮುಂಬರುವ ಮಧ್ಯ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ 230 ಕ್ಷೇತ್ರಗಳ ಪೈಕಿ 200 ಕ್ಷೇತ್ರಗಳಲ್ಲಿ ಸ್ಪರ್ಧಿಸುವುದಾಗಿ ಶರದ್ ಪವಾರ್ ನೇತೃತ್ವದ ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ಘೋಷಿಸಿದೆ. ಇದರಿಂದ ಕಾಂಗ್ರೆಸ್‌ಗೆ ತುಸು ಹಿನ್ನಡೆಯಾಗಬಹುದು ಎಂದು ರಾಜಕೀಯ ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ.

ಪಕ್ಷದ ಹಿರಿಯ ನಾಯಕ, ಮಹಾರಾಷ್ಟ್ರ ವಿಧಾನ ಪರಿಷತ್ ಸದಸ್ಯ ರಾಜೇಂದ್ರ ಜೈನ್ ಮತ್ತು ಪಕ್ಷದ ಗುಜರಾತ್ ಘಟಕದ ವಕ್ತಾರ ನಕುಲ್ ಸಿಂಗ್ ಅವರು ಶನಿವಾರ ಭೊಪಾಲ್‌ನಲ್ಲಿ ಪ್ರಣಾಳಿಕೆ ಬಿಡುಗಡೆ ಮಾಡಿದರು.

‘ಸಮಾನ ಮನಸ್ಕ ಪಕ್ಷಗಳ ಜತೆ ಮೈತ್ರಿ ಮಾಡಿಕೊಳ್ಳಲು ಪ್ರಯತ್ನಿಸುತ್ತಿದ್ದೇವೆ. 230 ಕ್ಷೇತ್ರಗಳ ಪೈಕಿ 200ರಲ್ಲಿ ಸ್ಪರ್ಧಿಸಲಿದ್ದೇವೆ’ ಎಂದು ಉಭಯ ನಾಯಕರು ತಿಳಿಸಿದರು.

ಮಧ್ಯ ಪ್ರದೇಶ ವಿಧಾನಸಭೆಗೆ ನವೆಂಬರ್‌ 28ರಂದು ಚುನಾವಣೆ ನಡೆಯಲಿದ್ದು, ಡಿಸೆಂಬರ್‌ 11ರಂದು ಮತ ಎಣಿಕೆ ನಡೆಯಲಿದೆ.

ಪ್ರಣಾಳಿಕೆಯ ಪ್ರಮುಖ ಅಂಶಗಳು

* ರೈತರಿಗೆ ಉಚಿತ ವಿದ್ಯುತ್ ಮತ್ತು ನೀರು

* ಪೆಟ್ರೋಲ್ ಮತ್ತು ಡೀಸೆಲ್ ಜಿಎಸ್‌ಟಿ (ಸರಕು ಮತ್ತು ಸೇವಾ ತೆರಿಗೆ) ವ್ಯಾಪ್ತಿಗೆ

* ಮಹಿಳಾ ಸುರಕ್ಷತೆಗೆ ಆದ್ಯತೆ

* ಉದ್ಯೋಗ ಸೃಷ್ಟಿಗೆ ಕ್ರಮ

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 2

  Angry

Comments:

0 comments

Write the first review for this !