ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಹಾರಾಷ್ಟ್ರ| ರಾಜೀನಾಮೆ ಇಲ್ಲ: ಎನ್‌ಸಿಪಿ ಶಾಸಕ ಪ್ರಕಾಶ್ ಸೋಲಂಕಿ ಸ್ಪಷ್ಟನೆ

ಮಹಾರಾಷ್ಟ್ರ ರಾಜಕೀಯ: ವದಂತಿಗೆ ತೆರೆ ಎಳೆದ ಶಾಸಕ
Last Updated 31 ಡಿಸೆಂಬರ್ 2019, 13:15 IST
ಅಕ್ಷರ ಗಾತ್ರ

ಮುಂಬೈ: ಮಹಾರಾಷ್ಟ್ರ ಸಚಿವ ಸಂಪುಟದಲ್ಲಿ ಸ್ಥಾನ ದೊರಕದೆ ಹೋಗಿದ್ದಕ್ಕೆ ಅಸಮಾಧಾನಗೊಂಡಿರುವ ಎನ್‌ಸಿಪಿ ಶಾಸಕ ಪ್ರಕಾಶ್ ಸೋಲಂಕಿ, ರಾಜೀನಾಮೆ ನೀಡುವುದಿಲ್ಲ ಎಂದು ಮಂಗಳವಾರ ಸ್ಪಷ್ಟಪಡಿಸಿದ್ದಾರೆ.

ಉಪಮುಖ್ಯಮಂತ್ರಿ ಅಜಿತ್ ಪವಾರ್ ಹಾಗೂ ಎನ್‌ಸಿಪಿ ರಾಜ್ಯ ಘಟಕ ಮುಖ್ಯಸ್ಥ ಜಯಂತ್ ಪಾಟೀಲ್ ಅವರನ್ನು ಭೇಟಿಯಾದ ಬಳಿಕ ಅವರು ಈ ನಿರ್ಧಾರ ಪ್ರಕಟಿಸಿದ್ದಾರೆ.

‘ನಾಲ್ಕು ಬಾರಿ ಶಾಸಕನಾಗಿರುವುದರಿಂದ, ಉದ್ಧವ್ ಠಾಕ್ರೆ ನೇತೃತ್ವದ ಸಚಿವ ಸಂಪುಟ ವಿಸ್ತರಣೆ ವೇಳೆ ‘ನ್ಯಾಯ’ ದೊರಕಬಹುದು’ ಎಂದು ಅವರು ಹೇಳಿದ್ದಾರೆ.

ಬೀಡ್ ಜಿಲ್ಲೆಯ ಮಜಲಗಾಂವ್ ಕ್ಷೇತ್ರ ಪ್ರತಿನಿಧಿಸುವ ಸೋಲಂಕಿ, ‘ರಾಜಕಾರಣ ಮಾಡಲು ನಾನು ಅರ್ಹನಲ್ಲ. ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ’ ಎಂದು ಸೋಮವಾರ ಹೇಳಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT