ಮಂಗಳವಾರ, ಆಗಸ್ಟ್ 4, 2020
22 °C

ಶ್ರೀನಗರ: 10 ತಿಂಗಳ ಬಳಿಕ ಅಲಿ ಅಲಿ ಮೊಹಮದ್‌ ಸಾಗರ್ ಬಿಡುಗಡೆ

ಪಿಟಿಐ Updated:

ಅಕ್ಷರ ಗಾತ್ರ : | |

ಅಲಿ ಮಹಮದ್ ಸಾಗರ್‌

ಶ್ರೀನಗರ: ನ್ಯಾಷನಲ್‌ ಕಾನ್ಫರೆನ್ಸ್‌ ಪಕ್ಷದ ಪ್ರಧಾನ ಕಾರ್ಯದರ್ಶಿ ಅಲಿ ಮೊಹಮದ್‌ ಸಾಗರ್‌ ಅವರನ್ನು 10 ತಿಂಗಳ ನಂತರ ಬುಧವಾರ ಬಿಡುಗಡೆ ಮಾಡಲಾಗಿದೆ.

ಕಳೆದ ವರ್ಷ ಆಗಸ್ಟ್‌ನಲ್ಲಿ ಜಮ್ಮು ಮತ್ತು ಕಾಶ್ಮೀರದ ವಿಶೇಷ ಸ್ಥಾನಮಾನ ರದ್ದು ಗೊಳಿಸಿದ ಬಳಿಕ ಸಾರ್ವಜನಿಕ ಸುರಕ್ಷತಾ ಕಾಯ್ದೆ ಅಡಿ ಅಲಿ ಅವರನ್ನು ಬಂಧಿಸಲಾಗಿತ್ತು. ಇವರ ಬಂಧನವನ್ನು ಮಂಗಳವಾರ ಜಮ್ಮು ಮತ್ತು ಕಾಶ್ಮೀರ ಹೈಕೋರ್ಟ್‌ ರದ್ದು ಮಾಡಿತ್ತು.

67 ವರ್ಷದ ಅಲಿ ಅವರು ಆರು ಬಾರಿ ಶಾಸಕರಾಗಿದ್ದವರು. ತಮ್ಮ ಪ್ರಭಾವ ಬಳಸಿ ಜನರನ್ನು ಸರ್ಕಾರ ವಿರುದ್ಧ ಎತ್ತಿಕಟ್ಟ ಬಹುದು ಎನ್ನುವ ಕಾರಣದಿಂದಾಗಿ ಅವರನ್ನು ಬಂಧಿಸಲಾಗಿತ್ತು.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು