ಶುಕ್ರವಾರ, ಫೆಬ್ರವರಿ 26, 2021
19 °C

ಅತ್ಯಾಚಾರ ಪ್ರಕರಣ: ಠಾಣೆಯಲ್ಲೇ ಬೆಂಕಿ ಹಚ್ಚಿಕೊಂಡ ಸಂತ್ರಸ್ತೆ

ಪಿಟಿಐ Updated:

ಅಕ್ಷರ ಗಾತ್ರ : | |

ಜೈಪುರ: ತನ್ನ ಮೇಲೆ ಅತ್ಯಾಚಾರ ಎಸಗಿದ ಗಂಡನ ಸಂಬಂಧಿಕನನ್ನು ಬಂಧಿಸಬೇಕೆಂದು ಆಗ್ರಹಿಸಿದ ಮಹಿಳೆ ನ್ಯಾಯಕ್ಕಾಗಿ ಒತ್ತಾಯಿಸಿ ಪೊಲೀಸ್ ಠಾಣೆ ಆವರಣದಲ್ಲೇ ಬೆಂಕಿ ಹಚ್ಚಿಕೊಂಡು ಸಾವನ್ನಪ್ಪಿದ ಘಟನೆ ಜೈಪುರದಲ್ಲಿ ನಡೆದಿದೆ.

36 ವರ್ಷದ ಮಹಿಳೆ, 2015ರಲ್ಲಿ ತನ್ನ ಮೇಲೆ ಗಂಡನ ಸಂಬಂಧಿಕ ರವೀಂದ್ರ ಸಿಂಗ್ ಎನ್ನುವಾತ ಅತ್ಯಾಚಾರ ಎಸಗಿದ್ದಾನೆಂದು ಆರೋಪಿಸಿ, ಜೂನ್ 5ರಂದು ವೈಶಾಲಿ ನಗರ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಎಫ್‌ಐಆರ್ ದಾಖಲಾದ ಬಳಿಕವೂ ಪೊಲೀಸರು ಆರೋಪಿಸಿದ ಮಹಿಳೆ, ಠಾಣೆಯ ಗೇಟಿನ ಬಳಿ ಬೆಂಕಿ ಹಚ್ಚಿಕೊಂಡರು.

ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಸೋಮವಾರ ಬೆಳಿಗ್ಗೆ ಮೃತಪಟ್ಟರು ಎಂದು ಪೊಲೀಸರು ತಿಳಿಸಿದ್ದಾರೆ.  ಈ ಕುರಿತು ತನಿಖೆ ಕೈಗೊಳ್ಳಲು ರಾಷ್ಟ್ರೀಯ ಮಹಿಳಾ ಆಯೋಗ ಸೋಮವಾರ ಜೈಪುರಕ್ಕೆ ತಂಡವನ್ನು ಕಳುಹಿಸಿದೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು