ಮಂಗಳವಾರ, ಮೇ 18, 2021
24 °C

ದೇಶದೆಲ್ಲೆಡೆ ಭರದಿಂದ ಸಾಗಿರುವ ಮತಎಣಿಕೆ, ಎನ್‌‌ಡಿಎ ಮುನ್ನಡೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು:ದೇಶದೆಲ್ಲೆಡೆ ಮತ ಎಣಿಕೆ ಆರಂಭವಾಗಿದ್ದು, ಎನ್‌‌ಡಿಎ ಮೈತ್ರಿಕೂಟ ಮುಂದಿದ್ದು, ಯುಪಿಎ ಹಿಂದಿದೆ.

ದೇಶದೆಡ್ಡೆ ಗಮನ ಸೆಳೆದಿರುವ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಮೊದಲ ಸುತ್ತಿನ ಎಣಿಕೆ ಕಾರ್ಯ ಮುಗಿದಿದ್ದು ನಿಖಿಲ್ 800 ಮತಗಳ ಅಂತರದಲ್ಲಿ ಹಿಂದಿದ್ದಾರೆ ಎನ್ನಲಾಗಿದೆ. ತುಮಕೂರಿನಲ್ಲಿ ದೇವೇಗೌಡ ಅವರು 1050 ಮತಗಳಿಂದ ಹಿಂದಿದ್ದಾರೆ. ಮಂಗಳೂರಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ಮುಂದಿದ್ದು, ಉತ್ತರ ಪ್ರದೇಶದಲ್ಲಿ ಬಿಜೆಪಿಯ ರಾಜನಾಥಸಿಂಗ್ ಪ್ರತಿಸ್ಪರ್ಧಿಗಿಂತ ಮುಂದಿದ್ದಾರೆ.

ರಾಜ್ಯದಲ್ಲಿ 21 ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ ಕಾಯ್ದುಕೊಂಡಿದೆ. ಚಾಮರಾಜನಗರ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಹಿಂದಿದ್ದು, ಪ್ರತಿಸ್ಪರ್ಧಿ ಬಿಜೆಪಿಯ ಶ್ರೀನಿವಾಸ ಪ್ರಸಾದ್ ಮುಂದಿದ್ದಾರೆ. ಬೆಂಗಳೂರು ಉತ್ತರ ಕ್ಷೇತ್ರದಲ್ಲಿ ಕೃಷ್ಣ ಬೈರೇಗೌಡ 1500 ಮತಗಳ ಅಂತರದಲ್ಲಿ ಮುಂದಿದ್ದರೆ, ದಕ್ಷಿಣದಲ್ಲಿ ತೇಜಸ್ವಿಸೂರ್ಯ ಮುಂದಿದ್ದಾರೆ. ಅಲ್ಲದೆ, ಮೈಸೂರು ಲೋಕಸಭಾ ಕ್ಷೇತ್ರದಲ್ಲಿ ಪ್ರತಾಪ್ ಸಿಂಹ 12000 ಮತಗಳ ಅಂತರದಲ್ಲಿ ಮುಂದಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ವಿಜಯಶಂಕರ್ ಹಿಂದಿದ್ದಾರೆ. ತುಮಕೂರು ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಮುಂದಿದ್ದಾರೆ. ಜೆಡಿಎಸ್‌‌ನ ದೇವೇಗೌಡ ಹಿಂದಿದ್ದಾರೆ.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು