ಎನ್‌ಡಿಎ ಮೈತ್ರಿಕೂಟದ ಸಂಸದೀಯ ಮಂಡಳಿ ನಾಯಕರಾಗಿ ನರೇಂದ್ರಮೋದಿ ಆಯ್ಕೆ

ಬುಧವಾರ, ಜೂನ್ 19, 2019
26 °C

ಎನ್‌ಡಿಎ ಮೈತ್ರಿಕೂಟದ ಸಂಸದೀಯ ಮಂಡಳಿ ನಾಯಕರಾಗಿ ನರೇಂದ್ರಮೋದಿ ಆಯ್ಕೆ

Published:
Updated:

ನವದೆಹಲಿ: ನರೇಂದ್ರ ಮೋದಿ ಅವರನ್ನು ಲೋಕಸಭೆಯಲ್ಲಿ ತಮ್ಮ ಸಂಸದೀಯ ಪಕ್ಷದ ನಾಯಕನಾಗಿ ಎನ್‌ಡಿಎ ಮೈತ್ರಿಕೂಟದ ಸಂಸದರು ಶನಿವಾರ ಆಯ್ಕೆ ಮಾಡಿದರು.

ಶನಿವಾರ ಸಂಸತ್ ಭವನದ ಸೆಂಟ್ರಲ್‌ ಹಾಲ್‌ನಲ್ಲಿ ನಡೆದ ಸಭೆಯಲ್ಲಿ ಬಿಜೆಪಿಯ 303 ಮತ್ತು ಎನ್‌ಡಿಎ ಮೈತ್ರಿಕೂಟದ ಇತರ ಪಕ್ಷಗಳ 50 ಸಂಸದರು ಪಾಲ್ಗೊಂಡಿದ್ದರು.

ಬಿಜೆಪಿಯ ಹಿರಿಯ ನಾಯಕರಾದ ಲಾಲ್‌ ಕೃಷ್ಣ ಅಡ್ವಾಣಿ ಮತ್ತು ಮುರಳಿ ಮನೋಹರ್ ಜೋಷಿ ಅವರೂ ಭಾಗಿಯಾಗಿದ್ದು, ನರೇಂದ್ರ ಮೋದಿ ಅವರೊಂದಿಗೆ ವೇದಿಕೆ ಹಂಚಿಕೊಂಡರು.  ಮೊದಲಿಗೆ ಮೋದಿ ಅವರನ್ನು ಬಿಜೆಪಿ ಸಂಸದೀಯ ಪಕ್ಷದ ನಾಯಕನಾಗಿ ಆಯ್ಕೆ ಮಾಡಲಾಯಿತು.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ನರೇಂದ್ರ ಮೋದಿ ಅವರನ್ನು ಬಿಜೆಪಿ ಸಂಸದೀಯ ಪಕ್ಷದ ನಾಯಕನಾಗಿ ಆಯ್ಕೆ ಮಾಡುವ ಪ್ರಸ್ತಾವವನ್ನು ಸಭೆಯ ಮುಂದಿರಿಸಿದರು. ಇದನ್ನು ಸಂಸದರಾದ ರಾಜನಾಥ್ ಸಿಂಗ್ ಮತ್ತು ನಿತಿನ್ ಗಡ್ಕರಿ ಅವರು ಅನುಮೋದಿಸಿದರು. ಬಿಜೆಪಿ ಸದಸ್ಯರು ಕೈಮೇಲೆತ್ತುವ ಮೂಲಕ ಪ್ರಸ್ತಾವವನ್ನು ಅನುಮೋದಿಸಿದರು.

ಆನಂತರ ಮೋದಿ ಅವರನ್ನು ಎನ್‌ಡಿಎ ಸಂದೀಯ ನಾಯಕನಾಗಿ ಆಯ್ಕೆ ಮಾಡುವ ಪ್ರಕ್ರಿಯೆ ನಡೆಯಿತು. ಶಿರೋಮಣಿ ಅಕಾಲಿ ದಳದ ನಾಯಕ ಪ್ರಕಾಶ್‌ ಸಿಂಗ್ ಬಾದಲ್‌ ಅವರು ಈ ಪ್ರಸ್ತಾವವನ್ನು ಮಂಡಿಸಿದರು. ಅದನ್ನು ಜೆಡಿಯು ನಾಯಕ ಮತ್ತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್, ಶಿವಸೇನಾ ಮುಖ್ಯಸ್ಥ ಉದ್ಧವ್ ಠಾಕ್ರೆ ಹಾಗೂ ಎಲ್‌ಜೆಪಿಯ ರಾಮ್‌ವಿಲಾಸ್ಪಾ ಸ್ವಾನ್ ಅನುಮೋದಿಸಿದರು. ಆನಂತರ ಎನ್‌ಡಿಎ ಮೈತ್ರಿಕೂಟದ ಸಂಸದರು ಕೈಮೇಲೆತ್ತುವ ಮೂಲಕ ಪ್ರಸ್ತಾವವನ್ನು ಅನುಮೋದಿಸಿದರು.

ಸರ್ಕಾರ ರಚನೆಗೆ ಆಹ್ವಾನ

ಎನ್‌ಡಿಎ ಸಂಸದೀಯ ಪಕ್ಷದ ಸಭೆಯ ಬಳಿಕ, ರಾತ್ರಿ 8 ಗಂಟೆಗೆ ಮೋದಿ ಅವರು ರಾಷ್ಟ್ರಪತಿ ರಾಮನಾಥ ಕೋವಿಂದ್‌ ಅವರನ್ನು ಭೇಟಿಮಾಡಿ ಸರ್ಕಾರ ರಚನೆಯ ಹಕ್ಕು ಮಂಡಿಸಿದರು.

ಇದಾದ ಬಳಿಕ ರಾಷ್ಟ್ರಪತಿ ಅವರು ಸರ್ಕಾರ ರಚಿಸುವಂತೆ ಮೋದಿ ಅವರಿಗೆ ಆಹ್ವಾನ ನೀಡಿದ್ದಾರೆ.

ಪ್ರಮಾಣವಚನ ಸ್ವೀಕಾರ ದಿನಾಂಕ ಇನ್ನಷ್ಟೇ ನಿರ್ಧಾರ ಆಗಬೇಕಿದೆ.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 7

  Happy
 • 0

  Amused
 • 1

  Sad
 • 0

  Frustrated
 • 0

  Angry

Comments:

0 comments

Write the first review for this !