ಸಂವಿಧಾನದಲ್ಲಿ ಹಿಂಸಾಚಾರಕ್ಕೆ ಸ್ಥಾನವಿಲ್ಲ: ಕೋವಿಂದ್‌

5

ಸಂವಿಧಾನದಲ್ಲಿ ಹಿಂಸಾಚಾರಕ್ಕೆ ಸ್ಥಾನವಿಲ್ಲ: ಕೋವಿಂದ್‌

Published:
Updated:
Deccan Herald

ತಿರುವನಂತಪುರ: ಕೇರಳದಲ್ಲಿ ನಡೆಯುತ್ತಿರುವ ರಾಜಕೀಯ ಹಿಂಸಾಚಾರಗಳ ಕುರಿತು ಖೇದ ವ್ಯಕ್ತಪಡಿಸಿದ ರಾಷ್ಟ್ರಪತಿ ರಾಮನಾಥ ಕೋವಿಂದ್‌, ‘ಸಂವಿಧಾನದಲ್ಲಿ ಹಿಂಸಾಚಾರಕ್ಕೆ ಸ್ಥಾನವಿಲ್ಲ’ ಎಂದಿದ್ದಾರೆ.

ಕೇರಳ ವಿಧಾನಸಭೆಯ ವಜ್ರಮಹೋತ್ಸವ ಆಚರಣೆಯ ಸಮಾರೋಪ ಸಮಾರಂಭ ಉದ್ಘಾಟಿಸಿ ಸೋಮವಾರ ಅವರು ಮಾತನಾಡಿದರು.

‘ಚರ್ಚೆಯ ಇತಿಹಾಸ, ಪರಸ್ಪರ ಗೌರವದಿಂದ ವರ್ತಿಸುವುದು ಮತ್ತು ಇನ್ನೊಬ್ಬರ ಅಭಿಪ್ರಾಯಗಳಿಗೂ ಬೆಲೆ ಕೊಡುವುದು ಕೇರಳ ಸಮಾಜದ ಹೆಗ್ಗುರುತು. ಆದರೂ ರಾಜ್ಯದ ಕೆಲವೆಡೆ ರಾಜಕೀಯ ಹಿಂಸಾಚಾರಗಳು ನಡೆಯುತ್ತಿರುವುದು ದುರದೃಷ್ಟಕರ’ ಎಂದಿದ್ದಾರೆ.

‘ಹಿಂಸಾಚಾರಗಳನ್ನು ತಡೆಯಲು ಎಲ್ಲಾ ರಾಜಕೀಯ ಪಕ್ಷಗಳು ಮತ್ತು ನಾಗರಿಕರು ಮುಂದಾಗಬೇಕು’ ಎಂದೂ ಕೋವಿಂದ್‌ ಹೇಳಿದ್ದಾರೆ.

ಕೇರಳ ರಾಜ್ಯಪಾಲ ಪಿ. ಸದಾಶಿವಂ, ಮುಖ್ಯಮಂತ್ರಿ ಪಿಣರಾಯಿ ವಿಜಯನ್‌, ವಿರೋಧ ಪಕ್ಷದ ನಾಯಕ ರಮೇಶ್‌ ಚೆನ್ನಿತ್ತಲ, ಸ್ಪೀಕರ್‌ ಪಿ. ಶ್ರೀರಾಮಕೃಷ್ಣನ್‌ ಇದ್ದರು.

 

 

 

 

 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !