ಭಾನುವಾರ, ಮೇ 9, 2021
25 °C

ಅಲ್ಪಸಂಖ್ಯಾತ ಕಾಲೇಜುಗಳಿಗೂ ನೀಟ್‌ ಅನ್ವಯ: ಸುಪ್ರೀಂ ಕೋರ್ಟ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ: ವೈದ್ಯಕೀಯ, ದಂತ ವೈದ್ಯ ಕೋರ್ಸ್‌ನ ಪ್ರವೇಶಕ್ಕೆ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯೇ (ನೀಟ್‌) ಆಧಾರ. ಅಲ್ಪಸಂಖ್ಯಾತ ಸಮುದಾಯ ಮತ್ತು ಖಾಸಗಿ ಸಂಸ್ಥೆಗಳು ನಡೆಸುವ ಕಾಲೇಜುಗಳಿಗೂ ನೀಟ್‌ಅನ್ವಯ. ಈ ಪರೀಕ್ಷೆಯ ಆಧಾರದಲ್ಲಿ ಪ್ರವೇಶ ನೀಡುವುದರಿಂದ ಅಲ್ಪಸಂಖ್ಯಾತ ಸಮುದಾಯಗಳು ನಡೆಸುವ ಕಾಲೇಜುಗಳ ಹಕ್ಕಿನ ಉಲ್ಲಂಘನೆ ಆಗುವುದಿಲ್ಲ ಎಂದು ಸುಪ್ರೀಂ ಕೋರ್ಟ್‌ ಹೇಳಿದೆ. 

ವೈದ್ಯಕೀಯ, ದಂತ ವೈದ್ಯ ಕೋರ್ಸ್‌ಪ್ರವೇಶಕ್ಕಾಗಿ ತಮ್ಮದೇ ಆದ ಪರೀಕ್ಷೆ ನಡೆಸಲು ಅಲ್ಪಸಂಖ್ಯಾತ ಸಮುದಾಯದವರ ಸಂಸ್ಥೆಗಳಿಗೆ ಅವಕಾಶ ನೀಡುವಂತೆ ಕೋರಿ ವೆಲ್ಲೂರಿನ ಕ್ರಿಶ್ಚಿಯನ್‌ ಮೆಡಿಕಲ್‌ ಕಾಲೇಜ್‌ ಹಾಗೂ ಇತರ ಸಂಸ್ಥೆಗಳು ಸಲ್ಲಿಸಿದ್ದ ಮನವಿಯನ್ನು ಕೋರ್ಟ್‌ ವಜಾ ಮಾಡಿದೆ.

ನೀಟ್‌ ಮೂಲಕ ಪ್ರವೇಶ ನೀಡುವಂತೆ ನಿರ್ಬಂಧಿಸುವ ಅಧಿಕಾರ ಸರ್ಕಾರಕ್ಕೆ ಇಲ್ಲ ಎಂದು ಅರ್ಜಿದಾರರು ವಾದಿಸಿದ್ದರು. ಆದರೆ, ಈ ವಾದವನ್ನು ಕೋರ್ಟ್‌ ಮಾನ್ಯ ಮಾಡಲಿಲ್ಲ. 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು