ಶುಕ್ರವಾರ, ಜುಲೈ 1, 2022
22 °C

ಗ್ರಾಮೀಣರಿಗೆ ನೀಟ್‌ನಿಂದ ಅನಾನುಕೂಲ: ಮದ್ರಾಸ್‌ ಹೈಕೋರ್ಟ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚೆನ್ನೈ: ‘ಕೋಚಿಂಗ್‌ಗಾಗಿ ಲಕ್ಷಾಂತರ ರೂಪಾಯಿ ವ್ಯಯಿಸಿದ ವಿದ್ಯಾರ್ಥಿಗಳಿಗೆ ಮಾತ್ರವೇ ನೀಟ್‌ನಿಂದ ಲಾಭವಾಗಿದೆ. ಗ್ರಾಮೀಣ ವಿದ್ಯಾರ್ಥಿಗಳಿಗೆ ಅನಾನುಕೂಲವಾಗಿದೆ’ ಎಂದು ಮದ್ರಾಸ್‌ ಹೈಕೋರ್ಟ್‌ ಹೇಳಿದೆ.

ನೀಟ್‌ ನಿಯಮಗಳನ್ನು ರೂಪಿಸಿರುವ ಕೇಂದ್ರ ಸರ್ಕಾರ ಈ ಅಂಶವನ್ನು ಗಣನೆಗೆ ತೆಗೆದುಕೊಳ್ಳಬೇಕು ಎಂದು ನ್ಯಾಯಮೂರ್ತಿ ಎನ್.ಕಿರುಬಕರನ್‌, ಪಿ.ವೇಲುಮುರುಗನ್ ಅವರಿದ್ದ ನ್ಯಾಯಪೀಠ ಸಲಹೆ ಮಾಡಿದೆ.

ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಪೀಠ, ಅಕ್ಟೋಬರ್‌ 25ರ ನಿರ್ದೇಶನದಂತೆ ಹೆಚ್ಚುವರಿ ಅಡ್ವೋಕೇಟ್‌ ಜನರಲ್‌ ಅವರು ಕೋರ್ಸ್‌ಗೆ ಪ್ರವೇಶ ಪಡೆದವರ ಪೈಕಿ ಕೋಚಿಂಗ್ ಪಡೆದವರು ಮತ್ತು ಪಡೆಯದವರ ಪಟ್ಟಿಯನ್ನು ನೀಡಿದ ಬಳಿಕ ಈ ಅಭಿಪ್ರಾಯ ವ್ಯಕ್ತಪಡಿಸಿತು.

ಕೋಚಿಂಗ್ ಪಡೆಯದ 48 ವಿದ್ಯಾರ್ಥಿಗಳು ಸರ್ಕಾರಿ ವೈದ್ಯಕೀಯ ಕಾಲೇಜುಗಳಿಗೆ ಪ್ರವೇಶ ಪಡೆದಿದ್ದರೆ, ಕೋಚಿಂಗ್ ಪಡೆದು ಪ್ರವೇಶ ಪಡೆದ ವಿದ್ಯಾರ್ಥಿಗಳ ಸಂಖ್ಯೆ 1,598. ಅಲ್ಲದೆ, ಕೋಚಿಂಗ್ ಪಡೆದಿರುವ 3,033 ವಿದ್ಯಾರ್ಥಿಗಳು ವಿವಿಧ ಸರ್ಕಾರಿ ಕಾಲೇಜುಗಳಿಗೆ ಎಂದು ಸರ್ಕಾರ ಕೋರ್ಟ್‌ಗೆ ಮಾಹಿತಿ ನೀಡಿತ್ತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು