ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜನರ ಖಾತೆಗೆ ₹ 15 ಲಕ್ಷ ಹಾಕುತ್ತೇವೆ ಎಂದು ನಾವು ಹೇಳಿಲ್ಲ: ರಾಜನಾಥ್‌ ಸಿಂಗ್‌

Last Updated 9 ಏಪ್ರಿಲ್ 2019, 10:14 IST
ಅಕ್ಷರ ಗಾತ್ರ

ನವದೆಹಲಿ: ಜನರ ಅಕೌಂಟ್‌ಗೆ ₹15 ಲಕ್ಷ ಹಾಕುತ್ತೇವೆ ಎಂದು ನಾವು ಹೇಳಿಲ್ಲ ಎಂದು ಕೇಂದ್ರ ಗೃಹ ಸಚಿವ ರಾಜನಾಥ್‌ ಸಿಂಗ್‌ ಮಂಗಳವಾರ ಸ್ಪಷ್ಟಪಡಿಸಿದ್ದಾರೆ.

ಎಎನ್‌ಐ ಸುದ್ದಿ ಸಂಸ್ಥೆಗೆ ನೀಡಿದ ಸಂದರ್ಶನದಲ್ಲಿ ಜನರ ಅಕೌಂಟ್‌ಗೆ ₹ 15 ಲಕ್ಷ ವರ್ಗಾಯಿಸುತ್ತೇವೆ ಎಂದು ನಾವು ಎಲ್ಲೂಹೇಳಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ವಿವಿಧ ರಾಜ್ಯಗಳಲ್ಲಿ ನಡೆಯುತ್ತಿರುವ ಐಟಿ ದಾಳಿಗೂ ನಮಗೂ ಸಂಬಂಧವಿಲ್ಲ, ಸರ್ಕಾರ ಐಟಿ ಮತ್ತು ಜಾರಿ ನಿರ್ದೇಶನಾಲಯದ ಅಧಿಕಾರಿಗಳ ಮೇಲೆ ಯಾವುದೇ ರೀತಿಯ ಪ್ರಭಾವ ಬೀರಿಲ್ಲ, ವಿರೋಧ ಪಕ್ಷಗಳು ಸುಳ್ಳು ಆರೋಪ ಮಾಡುತ್ತಿವೆ ಎಂದರು. ಕಾಶ್ಮೀರವನ್ನು ಪ್ರತ್ಯೇಕಿಸುವ ಯಾವುದೇ ಉದ್ದೇಶ ಇಲ್ಲ, ಕಾಶ್ಮೀರ ಭಾರತದ ಅವಿಬಾಜ್ಯ ಅಂಗವಾಗಿದೆ. ಕಾಶ್ಮೀರಕ್ಕೆ ಮತ್ತೊಬ್ಬ ಪ್ರಧಾನಿಬೇಕಿಲ್ಲ ಎಂದರು.

ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ರಾಜ್ಯದ ಸ್ಥಾನಮಾನ ನೀಡಿರುವ ಸಂವಿಧಾನದ 370ನೇ ವಿಧಿ ಹಾಗೂ 35ಎ ವಿಧಿಗಳನ್ನು ವಜಾ ಮಾಡಿದರೆ ಕಣಿವೆ ರಾಜ್ಯದ ಜನರ ಜೀವನ ಮಟ್ಟ ಸುಧಾರಣೆಯಾಗಲಿದೆ ಎಂದು ರಾಜನಾಥ್‌ ಸಿಂಗ್‌ ಎಂದರು.

ಕಾಶ್ಮೀರದ ಮಾಜಿ ಮುಖ್ಯಮಂತ್ರಿಗಳಾದ ಮೆಹಬೂಬ ಮುಫ್ತಿ ಮತ್ತು ಫಾರೂಕ್‌ ಅಬ್ದುಲ್ಲಾ ಕಾಶ್ಮೀರದ ವಿಷಯವನ್ನು ರಾಜಕೀಯಕ್ಕೆ ಬಳಕೆ ಮಾಡುತ್ತಿದ್ದಾರೆ ಎಂದು ಗಂಭೀರ ಆರೋಪ ಮಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT