ಶನಿವಾರ, ಜೂನ್ 6, 2020
27 °C

ದೇಶದಲ್ಲಿ ಒಂದೇ ದಿನ 773 ಹೊಸ ಪ್ರಕರಣ, ಸತ್ತವರ ಒಟ್ಟು ಸಂಖ್ಯೆ 124

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ: ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶದ ವಿವಿಧೆಡೆ ಸೋಂಕಿನ ಪ್ರಮಾಣದಲ್ಲಿ ಏರಿಕೆ ಕಂಡು ಬಂದಿದೆ. ಈವರೆಗೆ ದೇಶದಲ್ಲಿ ಒಟ್ಟು 5194 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. ಈ ಪೈಕಿ 773 ಮಂದಿಯಲ್ಲಿ ಹೊಸದಾಗಿ ಸೋಂಕು ಕಾಣಿಸಿಕೊಂಡಿದೆ. ಕಳೆದ 24 ಗಂಟೆಗಳ ಅವಧಿಯಲ್ಲಿ 35 ಮಂದಿ ಮೃತಪಟ್ಟಿದ್ದಾರೆ. ಈವರೆಗೆ ಮೃತಪಟ್ಟವರ ಒಟ್ಟು ಸಂಖ್ಯೆ 149 ದಾಟಿದೆ.

ವಿಶ್ವದ ವಿವಿಧೆಡೆ ಕೋವಿಡ್-19 ಬಾಧಿತರ ಸಂಖ್ಯೆ 15 ಲಕ್ಷ, ಮೃತರ ಸಂಖ್ಯೆ 80 ಸಾವಿರ ದಾಟಿದೆ. ಕೊರೊನಾ ವೈರಸ್ ಸೋಂಕು ಮೊದಲ ಬಾರಿಗೆ ಕಾಣಿಸಿಕೊಂಡ ಚೀನಾದ ವುಹಾನ್‌ನಲ್ಲಿ ಬದುಕು ಸಹಜ ಸ್ಥಿತಿಗೆ ಮರಳುತ್ತಿದೆ. ಹುಬೇ ಪ್ರಾಂತ್ಯದಲ್ಲಿ ಕಳೆದ 11 ವಾರಗಳಿಂದ ವಿಧಿಸಿದ್ದ ನಿರ್ಬಂಧವನ್ನು ತೆರವುಗೊಳಿಸಲಾಗಿದೆ.

'ದೇಶವನ್ನು ಉಳಿಸಲು ಲಾಕ್‌ಡೌನ್ ಮುಂದುವರಿಸುವುದು ಅನಿವಾರ್ಯವಾಗುತ್ತೆ. ಆರ್ಥಿಕತೆಗಿಂತಲೂ ಜನರ ಜೀವ ಉಳಿಸುವುದು ನಮ್ಮ ಅದ್ಯತೆ' ಎಂದು ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಅಭಿಪ್ರಾಯಪಟ್ಟಿದ್ದಾರೆ. ಇತರ ರಾಜ್ಯಗಳ ಮುಖ್ಯಮಂತ್ರಿಗಳೂ ಇದೇ ನಿಲುವು ತಳೆಯುತ್ತಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ಮಾರ್ಚ್ 24ರಂದು ದೇಶದಲ್ಲಿ ಮೂರು ವಾರಗಳ ಲಾಕ್‌ಡೌನ್ ಘೋ‍ಷಿಸಿದ್ದರು. ಲಾಕ್‌ಡೌನ್ ಅವಧಿ ಏಪ್ರಿಲ್ 14ಕ್ಕೆ ಮುಕ್ತಾಯವಾಗಲಿದೆ. ಆದರೆ ದಿನದಿಂದ ದಿನಕ್ಕೆ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವುದರಿಂದ ಲಾಕ್‌ಡೌನ್ ವಿಸ್ತರಿಸಬಹುದು ಎಂಬ ಮಾತುಗಳೂ ಕೇಳಿ ಬರುತ್ತಿವೆ.

ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳ ಅಭಿಪ್ರಾಯವನ್ನು ಪರಿಗಣಿಸಿಯೇ ಕೇಂದ್ರ ಸರ್ಕಾರದ ದೇಶದ ಹಿತದ ದೃಷ್ಟಿಯಿಂದ ಮುಂದಿನ ನಿರ್ಧಾರ ತೆಗೆದುಕೊಳ್ಳುತ್ತದೆ ಎಂದು ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ಹೇಳಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.