ಭಾನುವಾರ, ಸೆಪ್ಟೆಂಬರ್ 22, 2019
25 °C

ಶಬರಿಮಲೆ ಆಡಳಿತಕ್ಕೆ ಹೊಸ ವ್ಯವಸ್ಥೆ: ಚಿಂತನೆ

Published:
Updated:

ತಿರುವನಂತಪುರ: ಶಬರಿಮಲೆ ದೇವಸ್ಥಾನದ ಆಡಳಿತಕ್ಕೆ ಸಂಬಂಧಿಸಿದಂತೆ ಹೊಸ ಶಾಸನ ರೂಪಿಸುವ ಬಗ್ಗೆ ಚಿಂತನೆ ನಡೆಸಿರುವುದಾಗಿ ಕೇರಳ ಸರ್ಕಾರ ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ.

ಆದರೆ, ಎಲ್ಲಾ ವಯೋಮಾನದ ಮಹಿಳೆಯರಿಗೆ ಪ್ರವೇಶ ಕಲ್ಪಿಸುವ ವಿಚಾರವೂ ಸೇರಿದಂತೆ ದೇವಸ್ಥಾನದ ಸಂಪ್ರದಾಯ ಮತ್ತು ಆಚರಣೆಗೆ ಸಂಬಂಧಿಸಿದಂತೆ ಯಾವುದೇ ಬದಲಾವಣೆಗಳನ್ನು ಮಾಡುವ ಸಾಧ್ಯತೆ ಇಲ್ಲ ಎನ್ನಲಾಗುತ್ತಿದೆ.

ಹಿಂದೆ ಶಬರಿಮಲೆ ದೇವಸ್ಥಾನದ ಆಡಳಿತ ನೋಡಿಕೊಳ್ಳುತ್ತಿದ್ದ ಪಂಡಲಂ ವಂಶದ ಸದಸ್ಯರೊಬ್ಬರು ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿದಂತೆ ಕಳೆದ ವಾರ ಸರ್ಕಾರವು ಈ ಪ್ರತಿಕ್ರಿಯೆ ನೀಡಿದೆ. ‘ಶಬರಿಮಲೆಗೆ ಪ್ರತಿ ವರ್ಷ ಲಕ್ಷಾಂತರ ಭಕ್ತರು ಭೇಟಿ ನೀಡುತ್ತಿರುವುದರಿಂದ, ಪ್ರತ್ಯೇಕ ಆಡಳಿತ ವ್ಯವಸ್ಥೆ ರೂಪಿಸಲು ಸರ್ಕಾರ ಮುಂದಾಗಿದೆ. ತಿರುಪತಿಯ ಮಾದರಿಯಲ್ಲೇ ಇಲ್ಲಿಯೂ ವ್ಯವಸ್ಥೆಗಳನ್ನು ಕಲ್ಪಿಸುವ ಉದ್ದೇಶವಿದ್ದು, ಮೂವರು ಸದಸ್ಯರ ತಂಡವೊಂದು ಈಗಾಗಲೇ ತಿರುಪತಿಗೆ ಹೋಗಿ ಅಲ್ಲಿನ ವ್ಯವಸ್ಥೆಗಳ ಅಧ್ಯಯನ ನಡಸಿಬಂದಿದೆ’ ಎಂದು ಸರ್ಕಾರದ ಮೂಲಗಳು ‘ಪ್ರಜಾವಾಣಿ’ಗೆ ತಿಳಿಸಿವೆ.

Post Comments (+)