ಬುಧವಾರ, ಫೆಬ್ರವರಿ 26, 2020
19 °C

ನೂತನ ಶಿಕ್ಷಣ ನೀತಿ ಸಾರ್ವಜನಿಕರಿಗೆ ಶೀಘ್ರ ಲಭ್ಯ: ಸಚಿವ ಪೋಖ್ರಿಯಾಲ್‌

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ‘ನೂತನ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಶೀಘ್ರವೇ ಸಾರ್ವಜನಿಕರಿಗೂ ಲಭ್ಯವಾಗುವಂತಾಗಲು ಕ್ರಮ ಕೈಗೊಳ್ಳಲಾಗುವುದು’ ಎಂದು ಮಾನವ ಸಂಪನ್ಮೂಲ ಸಚಿವಾಲಯದ ಕಾರ್ಯದರ್ಶಿ ಆರ್‌.ಸುಬ್ರಮಣಿಯನ್‌ ಹೇಳಿದರು.

ಅವರು ಅಖಿಲ ಭಾರತೀಯ ತಾಂತ್ರಿಣ ಶಿಕ್ಷಣ ಮಂಡಳಿಯಲ್ಲಿ (ಎಐಸಿಟಿಇ) ಮಂಗಳವಾರ ಹಮ್ಮಿಕೊಂಡಿದ್ದ ಸ್ವಚ್ಛ ಕ್ಯಾಂಪಸ್‌ ರ‍್ಯಾಂಕಿಂಗ್‌ ಕಾರ್ಯಕ್ರಮದಲ್ಲಿ ಮಾತನಾಡಿದರು.

ಮಾನವ ಸಂಪನ್ಮೂಲ ಸಚಿವ ರಮೇಶ್‌ ಪೋಖ್ರಿಯಾಲ್‌ ನಿಶಾಂಕ್‌ ಮಾತನಾಡಿ, ‘ನೂತನ ಶಿಕ್ಷಣ ನೀತಿಯು ಭಾರತದ ವೈಭವವನ್ನು ಜಗತ್ತಿನ ಮುಂದೆ ತೆರೆದಿಡಲಿದೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.

7 ಸಾವಿರಕ್ಕೂ ಅಧಿಕ ಉನ್ನತ ಶಿಕ್ಷಣ ಸಂಸ್ಥೆಗಳು ರ‍್ಯಾಂಕಿಂಗ್‌ ನೀಡುವ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದವಲ್ಲದೇ, ಸ್ವಚ್ಛ ಮತ್ತು ಸ್ಮಾರ್ಟ್‌ ಕ್ಯಾಂಪಸ್‌ ವಿಭಾಗದಲ್ಲಿ 52 ಸಂಸ್ಥೆಗಳಿಗೆ ಪ್ರಶಸ್ತಿ ನೀಡಲಾಗಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು