ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಂಸತ್‌ ಅಧಿವೇಶನ: ಪರಿಸ್ಥಿತಿ ಆಧರಿಸಿ ನಿರ್ಧಾರ ಎಂದ ವೆಂಕಯ್ಯ ನಾಯ್ಡು

Last Updated 29 ಏಪ್ರಿಲ್ 2020, 20:00 IST
ಅಕ್ಷರ ಗಾತ್ರ

ನವದೆಹಲಿ: ‘ಪರಿಸ್ಥಿತಿ ಆಧಾರದ ಮೇಲೆ ಸಂಸತ್ತಿನ ಮುಂದಿನ ಅಧಿವೇಶನದ ಅವಧಿ ನಿರ್ಧಾರವಾಗಲಿದೆ’ ಎಂದು ರಾಜ್ಯಸಭಾ ಸಭಾಪತಿ ಎಂ.ವೆಂಕಯ್ಯ ನಾಯ್ಡು ಬುಧವಾರ ಹೇಳಿದ್ದಾರೆ.

ಕೊರೊನಾ ಸೋಂಕು ಹರಡುವುದನ್ನು ತಡೆಯಲು ದೇಶದಾದ್ಯಂತ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತಿದೆ. ಆದ್ದರಿಂದ ಎಂದಿನಂತೆ ಸಂಸತ್‌ ಅಧಿವೇಶನ ನಡೆಯುತ್ತದೆ ಎಂದು ನಿರೀಕ್ಷಿಸಬಹುದು ಎಂದು ನಾಯ್ಡು ಅವರು ಹೇಳಿರುವುದಾಗಿ ಮೂಲಗಳು ತಿಳಿಸಿವೆ.

ಈ ಪಿಡುಗಿನ ಸಂದರ್ಭದಲ್ಲಿಯೂ ರಾಜ್ಯಸಭೆ ಸದಸ್ಯರೊಂದಿಗೆ ಸಂವಹನ ನಡೆಸುವ ಸಲುವಾಗಿ ನಾಯ್ಡು ಅವರು ‘ಮಿಷನ್‌ ಕನೆಕ್ಟ್’ ನಡೆಸುತ್ತಿದ್ದು, ರಾಜ್ಯಸಭೆಯ 245 ಸದಸ್ಯರಲ್ಲಿ 241 ಜನರ ಜತೆ ಮಾತನಾಡಿದ್ದಾರೆ. ಈ ವೇಳೆ ರಾಜ್ಯಸಭೆಯ ಕೆಲವು ಸದಸ್ಯರು ಕೇಳಿದ ಪ್ರಶ್ನೆಗೆ ಉತ್ತರವಾಗಿ ಈ ಹೇಳಿಕೆ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT