ಮಂಗಳವಾರ, ಫೆಬ್ರವರಿ 18, 2020
16 °C

ಸಮುದ್ರಕ್ಕೆ ತ್ಯಾಜ್ಯ ಸೇರುವುದಕ್ಕೆ ತಡೆ: ವರದಿ ಕೇಳಿದ ಎನ್‌ಜಿಟಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ: ಒಳಚರಂಡಿ ಹಾಗೂ ಕೈಗಾರಿಕೆಗಳ ತ್ಯಾಜ್ಯ ಸಮುದ್ರ ಸೇರುವುದನ್ನು ತಡೆಯಲು ಕೈಗೊಂಡ ಕ್ರಮಗಳ ಕುರಿತು ಸಮಗ್ರ ವರದಿ ಸಲ್ಲಿಸುವಂತೆ ರಾಷ್ಟ್ರೀಯ ಹಸಿರು ಮಂಡಳಿ (ಎನ್‌ಜಿಟಿ) ನಿರ್ದೇಶನ ನೀಡಿದೆ.

ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿಗೆ ಒಂದು ತಿಂಗಳ ಒಳಗಾಗಿ ವರದಿ ಸಲ್ಲಿಸುವಂತೆ ಕರ್ನಾಟಕ ಸೇರಿದಂತೆ ಕರಾವಳಿ ಹೊಂದಿರುವ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಮಂಡಳಿಯ ನ್ಯಾಯಮೂರ್ತಿ ಆದರ್ಶಕುಮಾರ್‌ ಗೋಯಲ್‌ ನೇತೃತ್ವದ ಪ್ರಧಾನ ಪೀಠ ನಿರ್ದೇಶಿಸಿದೆ.

‘ನಿಗದಿತ ಗಡುವಿನೊಳಗೆ ವರದಿ ಸಲ್ಲಿಸಲು ವಿಫಲವಾಗುವ ರಾಜ್ಯಗಳು, ಈ ನಿರ್ದೇಶನವನ್ನು ಪಾಲಿಸುವವರೆಗೆ ಪ್ರತಿ ತಿಂಗಳು ₹  10 ಲಕ್ಷ ದಂಡ ಭರಿಸಬೇಕು’ ಎಂದೂ ಪೀಠ ಸೂಚಿಸಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು