ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶ್ರೀಲಂಕಾ ಸರಣಿ ಸ್ಫೋಟ: ತಮಿಳುನಾಡಿನಲ್ಲಿ ಎನ್‌ಐಎ ಶೋಧ

Last Updated 12 ಜೂನ್ 2019, 14:31 IST
ಅಕ್ಷರ ಗಾತ್ರ

ಕೊಯಮತ್ತೂರು:ಶ್ರೀಲಂಕಾದಲ್ಲಿ ನಡೆದ ಸರಣಿ ಬಾಂಬ್‌ ಸ್ಫೋಟಕ್ಕೆ ಸಂಬಂಧಿಸಿದಂತೆ, ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ನಗರದ ವಿವಿಧ ಸ್ಥಳಗಳಲ್ಲಿ ಬುಧವಾರ ಶೋಧ ಕಾರ್ಯ ನಡೆಸಿತು.

ಈಸ್ಟರ್ ದಿನದ ದಾಳಿಯ ಸಂಚುಕೋರರ ಜತೆ ಸಾಮಾಜಿಕ ಮಾಧ್ಯಮಗಳಲ್ಲಿ ಸಂಪರ್ಕದಲ್ಲಿದ್ದರು ಎಂಬ ಮಾಹಿತಿ ಆಧಾರದಲ್ಲಿ ಈ ಶೋಧ ಕಾರ್ಯ ನಡೆಸಲಾಗುತ್ತಿದೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

ಶೋಧ ಕಾರ್ಯಾಚರಣೆಯಲ್ಲಿ ಯಾವೆಲ್ಲ ದಾಖಲೆಗಳನ್ನು ಮತ್ತು ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂಬ ಮಾಹಿತಿ ಲಭ್ಯವಾಗಿಲ್ಲ.

ಕೇರಳ ಮತ್ತು ತಮಿಳುನಾಡಿನಲ್ಲಿ ಐಎಸ್‌ ಉಗ್ರ ಸಂಘಟನೆಯ ನಂಟು ತಿಳಿಯುವ ಉದ್ದೇಶದಿಂದ ಶೋಧ ಕಾರ್ಯ ಮುಂದುವರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇಸ್ಲಾಮಿಕ್‌ ಸ್ಟೇಟ್‌ ಸಂಘಟನೆ ಬಾಂಬ್‌ ಸ್ಫೋಟದ ಹೊಣೆ ಹೊತ್ತುಕೊಂಡಿತ್ತು. ಸ್ಥಳೀಯ ಉಗ್ರ ಸಂಘಟನೆ ನ್ಯಾಷನಲ್‌ ತೌಹೀದ್‌ ಜಮಾತ್‌ (ಎನ್‌ಟಿಜೆ)ಇಸ್ಲಾಮಿಕ್‌ ಸ್ಟೇಟ್‌ ಉಗ್ರ ಸಂಘಟನೆ ಸಹಾಯದಿಂದ ಈ ಕೃತ್ಯ ಎಸಗಿದೆ ಶ್ರೀಲಂಕಾ ಸರ್ಕಾರ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT