ಮಂಗಳವಾರ, ಫೆಬ್ರವರಿ 18, 2020
16 °C

ಉಗ್ರರಿಗೆ ಆಶ್ರಯ ನೀಡಿದ ಆರೋಪ: ಡಿವೈಎಸ್ಪಿ ದೇವಿಂದ್ರ ಸಿಂಗ್ ಎನ್ಐಎ ವಶಕ್ಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶ್ರೀನಗರ: ಉಗ್ರರೊಂದಿಗೆ ನಂಟು ಹೊಂದಿದ ಆರೋಪದ‌ ಮೇಲೆ ಬಂಧಿತರಾಗಿರುವ ಜಮ್ಮು ಕಾಶ್ಮೀರದ ಮಾಜಿ ಡಿಎಸ್‌ಪಿ ದೇವಿಂದ್ರ ಸಿಂಗ್ ಹಾಗೂ ನಾಲ್ವರು ಆರೋಪಿಗಳನ್ನು ಎನ್ಐಎ ನ್ಯಾಯಾಲಯವು 15ದಿನಗಳ ಕಾಲ ಎನ್ಐಎ ವಶಕ್ಕೆ ನೀಡಿದೆ.

ವಿಚಾರಣೆ ನಡೆಸಿದ ಎನ್ಐಎ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸುಭಾಷ್ ಸಿ ಗುಪ್ತ, ಡಿಎಸ್ಪಿ ಸಿಂಗ್ ಸೇರಿದಂತೆ ಇತರೆ ಆರೋಪಿಗಳಾದ ಸಯ್ಯದ್ ನವೀದ್ ಮುಷ್ತಾಕ್ ಶಾ, ಇರ್ಫಾನ್ ಸಫಿ ಮೀರ್, ರಫಿ ಅಹಮದ್ ರಾಥರ್ ಹಾಗೂ ಸಯ್ಯದ್ ಇರ್ಫಾನ್ ಅಹಮದ್ ಅವರನ್ನು ಹೆಚ್ಚಿನ ವಿಚಾರಣೆಗಾಗಿ ಐನ್ಐಎ ಹಾಗೂ ಪೊಲೀಸರ ವಶಕ್ಕೆ ನೀಡಿ ಆದೇಶ ಹೊರಡಿಸಿದ್ದಾರೆ.

ಅಲ್ಲದೇ ಪ್ರತಿ 48 ಗಂಟೆಗಳಿಗೆ ಒಮ್ಮೆ ಆರೋಪಿಗಳ ವೈದ್ಯಕೀಯ ತಪಾಸಣೆ ನಡೆಸುವಂತೆ ನ್ಯಾಯಾಧೀಶರು ತನಿಖಾ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು