ಗುಜರಾತ್: ಪಿಕ್ ಅಪ್ ವಾಹನ ಅಪಘಾತ, 9 ಸಾವು

ಮಂಗಳವಾರ, ಜೂನ್ 18, 2019
31 °C

ಗುಜರಾತ್: ಪಿಕ್ ಅಪ್ ವಾಹನ ಅಪಘಾತ, 9 ಸಾವು

Published:
Updated:

ಗುಜರಾತ್: ಪ್ರಯಾಣಿಕರನ್ನು ಸಾಗಿಸುತ್ತಿದ್ದ ವಾಹನವೊಂದು ಬ್ರೇಕ್ ಫೇಲ್ ಆಗಿ ರಸ್ತೆ ಪಕ್ಕದ ಹಳ್ಳಕ್ಕೆ ಬಿದ್ದ ಪರಿಣಾಮ 9 ಮಂದಿ ಮೃತಪಟ್ಟು 27 ಮಂದಿ ಗಾಯಗೊಂಡಿರುವ ಘಟನೆ ಗಾಂಧಿನಗರದ ಆಂಬಾಜಿ ಸಮೀಪ ಶುಕ್ರವಾರ ಸಂಭವಿಸಿದೆ.

ಗಾಂಧಿನಗರದಿಂದ 150 ಕಿಲೋ ಮೀಟರ್ ದೂರದಲ್ಲಿರುವ ಅಂಬಾಜಿಯ ತ್ರಿಶೂಲಿಯಾ ಘಾಟ್ ಸ್ಥಳದಲ್ಲಿ ಈ ಘಟನೆ ಸಂಭವಿಸಿದೆ. ಮೃತರೆಲ್ಲರೂ ವಡಗಾಂವ್ ಎಂಬ ಗ್ರಾಮದವರು. ಕಾರ್ಯಕ್ರಮ ಒಂದರ ನಿಮಿತ್ತ ಪಿಕ್ ಅಪ್ ವಾಹನದಲ್ಲಿ 30 ಮಂದಿ ತೆರಳುತ್ತಿದ್ದರು. ಸಂಜೆ ಮೂರರಿಂದ ನಾಲ್ಕು ಗಂಟೆ ಸಮಯದಲ್ಲಿ ವಾಹನ ಆಯತಪ್ಪಿ ಬಿದ್ದಿದೆ. ಸಾರ್ವಜನಿಕರೊಬ್ಬರು ಕೂಡಲೆ ಪೊಲೀಸರಿಗೆ ವಿಷಯ ತಿಳಿಸಿದ್ದಾರೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ಗಾಯಾಳುಗಳನ್ನು ಅಂಬಾಜಿ ಸರ್ಕಾರಿ ಆಸ್ಪತ್ರೆಗೆ ಸಾಗಿಸಿದ್ದಾರೆ. ಮೃತಪಟ್ಟವರ ಹೆಸರು ಇನ್ನೂ ಪತ್ತೆಯಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಸ್ಥಳಕ್ಕೆ ಹಿರಿಯ ಅಧಿಕಾರಿಗಳು ಭೇಟಿ ನೀಡಿದ್ದು ಮುಂದಿನ ಕ್ರಮ ಕೈಗೊಂಡಿದ್ದಾರೆ.

 

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 2

  Happy
 • 0

  Amused
 • 2

  Sad
 • 0

  Frustrated
 • 0

  Angry

Comments:

0 comments

Write the first review for this !