ಶನಿವಾರ, ಜನವರಿ 25, 2020
22 °C

ನಿಂತಿದ್ದ ಟ್ರಕ್‌ಗೆ ಡಿಕ್ಕಿ ಹೊಡೆದ ಬಸ್: 9 ಜನ ಸಾವು, 23 ಜನರಿಗೆ ಗಾಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ರಿವಾ, ಮಧ್ಯಪ್ರದೇಶ: ಹೆದ್ದಾರಿಯಲ್ಲಿ ನಿಂತಿದ್ದ ಟ್ರಕ್‌ಗೆ ಹಿಂಬದಿಯಿಂದ ಬಸ್ ಡಿಕ್ಕಿ ಹೊಡೆದ ಪರಿಣಾಮ 9 ಜನರು ಮೃತಪಟ್ಟು, 23 ಜನ ಗಾಯಗೊಂಡಿರುವ ಘಟನೆ ಮಧ್ಯಪ್ರದೇಶದ ರಿವಾ ಜಿಲ್ಲೆಯಲ್ಲಿ ನಡೆದಿದೆ.

ರಿವಾದ ಗುಧ್ ರಸ್ತೆಯಲ್ಲಿ ಸಿಧಿ ಮೂಲದ ಖಾಸಗಿ ಬಸ್ ಮುಂಜಾನೆ 6 ಗಂಟೆ ಸುಮಾರಿಗೆ ಡಿಕ್ಕಿ ಹೊಡೆದಿದೆ ಎಂದು ಜಿಲ್ಲಾ ಪೊಲೀಸ್ ಸೂಪರಿಂಟೆಂಡೆಂಟ್ ಅಬಿದ್ ಖಾನ್ ತಿಳಿಸಿದ್ದಾರೆ.

ಗಾಯಾಳುಗಳನ್ನು ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ ಮತ್ತು ಪೊಲೀಸರು ಸ್ಥಳದಲ್ಲಿ ಪರಿಶೀಲನೆ ಕೈಗೊಂಡಿದ್ದಾರೆ. ಸಂತ್ರಸ್ತರಿಗೆ ಪರಿಹಾರ ನೀಡುವ ಕುರಿತು ಯಾವುದೇ ಮಾಹಿತಿ ಲಭ್ಯವಾಗಿಲ್ಲ ಎಂದು ತಿಳಿಸಿದ್ದಾರೆ.

ಪ್ರಾಥಮಿಕ ಮಾಹಿತಿ ಪ್ರಕಾರ, ವೇಗವಾಗಿ ಚಲಿಸುತ್ತಿದ್ದ ಬಸ್ ದಟ್ಟವಾಗಿ ಮಂಜು ಕವಿದಿದ್ದರಿಂದಾಗಿ ರಸ್ತೆ ಕಾಣದೆ ಹೆದ್ದಾರಿ ಬಳಿಯಲ್ಲಿ ನಿಂತಿದ್ದ ಟ್ರಕ್‌ಗೆ ಡಿಕ್ಕಿ ಹೊಡೆದಿದೆ.

ಮಧ್ಯ ಪ್ರದೇಶದ ಮುಖ್ಯಮಂತ್ರಿ ಕಮಲ್‌ನಾಥ್ ಮಾತನಾಡಿ, ಮೃತರ ಕುಟುಂಬದವರಿಗೆ ನನ್ನ ಸಂತಾಪಗಳು. ಗಾಯಾಳುಗಳ ಸಂಪೂರ್ಣ ಚಿಕಿತ್ಸೆ ಮತ್ತು ಕುಟುಂಬಗಳಿಗೆ ಅಗತ್ಯ ಸಹಾಯವನ್ನು ಒದಗಿಸುವಂತೆ ಆದೇಶ ನೀಡಲಾಗಿದೆ ಎಂದು ಹೇಳಿದ್ದಾರೆ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು