ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೀರವ್‌ ಮೋದಿ ಹಸ್ತಾಂತರ ಲಂಡನ್‌ಗೆ ಅಧಿಕಾರಿಗಳು

Last Updated 27 ಮಾರ್ಚ್ 2019, 18:13 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ವಂಚನೆ ಹಾಗೂ ಹಣ ಅಕ್ರಮ ವರ್ಗಾವಣೆ ಆರೋಪದ ಮೇಲೆ ಇಂಗ್ಲೆಂಡ್‌ನಲ್ಲಿ ಬಂಧನಕ್ಕೊಳಗಾಗಿರುವ ವಜ್ರಾಭರಣ ವ್ಯಾಪಾರಿ ನೀರವ್ ಮೋದಿಯನ್ನು ಭಾರತಕ್ಕೆ ಕರೆತರಲು ಸಿಬಿಐ ಹಾಗೂ ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳನ್ನು ಒಳಗೊಂಡ ತಂಡವೊಂದು ಲಂಡನ್‌ಗೆ ಬುಧವಾರ ತೆರಳಿದೆ.

ಸ್ಕಾಟ್‌ಲ್ಯಾಂಡ್ ಯಾರ್ಡ್ ಪೊಲೀಸರಿಂದ ಬಂಧನಕ್ಕೊಳಗಾದ ನೀರವ್ ಮೋದಿ, ಲಂಡನ್‌ನ ವೆಸ್ಟ್‌ಮಿನ್‌ಸ್ಟರ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಸಲ್ಲಿಸಿರುವ ಜಾಮೀನು ಅರ್ಜಿ ವಿಚಾರಣೆ ಶುಕ್ರವಾರ (ಮಾರ್ಚ್‌ 29) ನಡೆಯಲಿದೆ.

ಈ ಸಂದರ್ಭದಲ್ಲಿಯೇ ಮೋದಿಯ ಹಸ್ತಾಂತರ ಪ್ರಕ್ರಿಯೆ ಕುರಿತು ಅಧಿಕಾರಿಗಳು ದಾಖಲೆ ಸಲ್ಲಿಸಲಿದ್ದಾರೆ.

ಮೋದಿ ಪತ್ನಿ ಆಮಿ ವಿರುದ್ಧ ಸಲ್ಲಿಸಿರುವ ಇತ್ತೀಚಿನ ಆರೋಪಪಟ್ಟಿಯೊಂದಿಗೆ ಇ.ಡಿ ಅಧಿಕಾರಿಗಳು ತೆರಳಿದ್ದಾರೆ.

ಪಂಜಾಬ್‌ ನ್ಯಾಷನಲ್‌ ಬ್ಯಾಂಕಿಗೆ ₹ 13,500 ಕೋಟಿ ವಂಚಿಸಿದ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ನೀರವ್‌ ಮೋದಿಯನ್ನುಭಾರತಕ್ಕೆ ಕರೆತರುವುದರಲ್ಲಿ ಯಾವುದೇ ವಿಳಂಬವಾಗುವುದಿಲ್ಲ ಎಂದು ತನಿಖಾ ಸಂಸ್ಥೆಗಳು ವಿಶ್ವಾಸ ವ್ಯಕ್ತಪಡಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT