ಗುರುವಾರ , ಫೆಬ್ರವರಿ 27, 2020
19 °C

ಕ್ಷಮಾದಾನ ಅರ್ಜಿ ತಿರಸ್ಕಾರ ಪ್ರಶ್ನಿಸಿ ಸುಪ್ರೀಂ ಮೆಟ್ಟಿಲೇರಿದ ನಿರ್ಭಯಾ ಅಪರಾಧಿ

ಪಿಟಿಐ Updated:

ಅಕ್ಷರ ಗಾತ್ರ : | |

prajavani

ನವದೆಹಲಿ: ನಿರ್ಭಯಾ ಅತ್ಯಾಚಾರ ಪ್ರಕರಣದ ಅಪರಾಧಿ ವಿನಯ್‌ ಕುಮಾರ್‌ ಶರ್ಮಾ ಕ್ಷಮಾದಾನ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ರಾಷ್ಟ್ರಪತಿಗಳು ತಿರಸ್ಕರಿಸಿದ್ದಾರೆ. ಇದನ್ನು ಪ್ರಶ್ನಿಸಿ ಅಪರಾಧಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾನೆ.

ನಿರ್ಭಯಾ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ನಾಲ್ವರು ಅಪರಾಧಿಗಳಲ್ಲಿ ಒಬ್ಬನಾದ ವಿನಯ್ ಶರ್ಮಾ, ಜನವರಿ 29ರಂದು ರಾಷ್ಟ್ರಪತಿಗಳಿಗೆ ಕ್ಷಮಾದಾನ ಅರ್ಜಿಯನ್ನು ಸಲ್ಲಿಸಿದ್ದ. ಆದರೆ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಕ್ಷಮಾದಾನದ ಅರ್ಜಿಯನ್ನು ಫೆಬ್ರುವರಿ 1ರಂದು ತಿರಸ್ಕರಿಸಿದ್ದರು. 

ಅಲ್ಲದೆ ತನ್ನ ಪರ ವಕೀಲ ಎ ಪಿ ಸಿಂಗ್ ಅವರ ಮೂಲಕ ಮರಣ ದಂಡನೆಯನ್ನು ಜೀವಾವಧಿ ಶಿಕ್ಷೆಯನ್ನಾಗಿ ಪರಿವರ್ತಿಸುವ ಕುರಿತು ಕೋರಿದ್ದಾರೆ.

ದೆಹಲಿ ನ್ಯಾಯಾಲಯ ಜನವರಿ 31ರಂದು ಮುಂದಿನ ಆದೇಶ ನೀಡುವವರೆಗೆ ನಾಲ್ವರು ಅಪರಾಧಿಗಳಿಗೆ ವಿಧಿಸಿರುವ ಗಲ್ಲು ಶಿಕ್ಷೆ ಜಾರಿಗೊಳಿಸುವುದಕ್ಕೆ ತಡೆ ನೀಡಿತ್ತು. ಮುಕೇಶ್ ಕುಮಾರ್ ಸಿಂಗ್(32), ಪವನ್ ಗುಪ್ತಾ(25), ವಿನಯ್ ಕುಮಾರ್ ಶರ್ಮಾ (26) ಮತ್ತು ಅಕ್ಷಯ್ ಕುಮಾರ್ (31) ಪ್ರಕರಣದ ನಾಲ್ವರು ಅಪರಾಧಿಗಳಾಗಿದ್ದಾರೆ. 

ಪ್ರಕರಣದ ಇನ್ನಿತರ ಅಪರಾಧಿಗಳಾದ ಅಕ್ಷಯ್‌ ಕುಮಾರ್‌ ಸಿಂಗ್‌, ಮುಖೇಶ್‌ ಸಿಂಗ್‌ ಮತ್ತು ಪವನ್ ಗುಪ್ತಾ ಅವರ ಕ್ಷಮಾದಾನದ ಅರ್ಜಿಯನ್ನೂ ರಾಷ್ಟ್ರಪತಿಗಳು ಈಗಾಗಲೇ ತಿರಸ್ಕರಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು