ಶುಕ್ರವಾರ, ಫೆಬ್ರವರಿ 21, 2020
29 °C
ನಿರ್ಭಯಾ ಅತ್ಯಾಚಾರ ಪ್ರಕರಣ

ಕ್ಷಮಾದಾನ ಅರ್ಜಿ ವಜಾ: ಪರಿಶೀಲನೆಗೆ ‘ಸುಪ್ರೀಂ’ ಮೊರೆ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ‘ಕ್ಷಮಾದಾನ ಅರ್ಜಿಯನ್ನು ವಜಾಗೊಳಿಸಿರುವ ರಾಷ್ಟ್ರಪತಿ ಅವರ ನಿರ್ಧಾರವನ್ನು ನ್ಯಾಯಾಂಗವು ಪರಿಶೀಲನೆಗೆ ಒಳಪಡಿಸಬೇಕು’ ಎಂದು ನಿರ್ಭಯಾ ಅತ್ಯಾಚಾರ ಪ್ರಕರಣದಲ್ಲಿ ಗಲ್ಲುಶಿಕ್ಷೆಗೆ ಗುರಿಯಾಗಿರುವ ಮುಖೇಶ್‌ ಕುಮಾರ್‌ ಸಿಂಗ್‌ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

ರಾಷ್ಟ್ರಪತಿ ರಾಮನಾಥ ಕೋವಿಂದ್‌ ಅವರು ಜನವರಿ 17ರಂದು ಕ್ಷಮಾದಾನ ಅರ್ಜಿಯನ್ನು ವಜಾಗೊಳಿಸಿದರು. 

‘ಕ್ಷಮಾದಾನ ಅರ್ಜಿಯನ್ನು ತಿರಸ್ಕರಿಸಿದ ವಿಧಾನವನ್ನು ನ್ಯಾಯಾಂಗ ಪರಿಶೀಲನೆಗಾಗಿ ವಿಧಿ 32ರ ಅಡಿಯಲ್ಲಿ ಅರ್ಜಿ ಸಲ್ಲಿಸಲಾಗಿದೆ’ ಎಂದು ಮುಖೇಶ್ ಪರ ವಕೀಲ ವೃಂದಾ ಗ್ರೋವರ್‌ ತಿಳಿಸಿದ್ದಾರೆ. ಸುಪ್ರೀಂ ಕೋರ್ಟ್ ಶತೃಘನ್ ಚೌಹಾನ್ ಪ್ರಕರಣದಲ್ಲಿ ನೀಡಿದ್ದ ತೀರ್ಪನ್ನು ಉಲ್ಲೇಖಿಸಿರುವುದಾಗಿ ಅವರು ಹೇಳಿದ್ದಾರೆ.  

ಸದ್ಯದ ಆದೇಶದ ಪ್ರಕಾರ, ನಿರ್ಭಯಾ ಅತ್ಯಾಚಾರ ಪ್ರಕರಣದ ಎಲ್ಲಾ ನಾಲ್ವರು ಅಪರಾಧಿಗಳನ್ನು ಫೆ.1ರ ಬೆಳಗ್ಗೆ 6 ಗಂಟೆಗೆ ನೇಣಿಗೇರಿಸಬೇಕಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು