ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಿರ್ಭಯಾ ಪ್ರಕರಣ: ಮುಖೇಶ್‌ ಅರ್ಜಿ ವಜಾ, ಮತ್ತೊಬ್ಬನಿಂದ ಕ್ಷಮಾದಾನಕ್ಕೆ ಅರ್ಜಿ

Last Updated 29 ಜನವರಿ 2020, 17:00 IST
ಅಕ್ಷರ ಗಾತ್ರ

ನವದೆಹಲಿ: ಕ್ಷಮಾದಾನದ ಅರ್ಜಿ ತಿರಸ್ಕರಿಸಿದ ರಾಷ್ಟ್ರಪತಿ ಕ್ರಮ ಪ್ರಶ್ನಿಸಿ ನಿರ್ಭಯಾ ಅತ್ಯಾಚಾರ ಪ್ರಕರಣದ ಅಪರಾಧಿ ಮುಖೇಶ್‌ಕುಮಾರ್ ಸಿಂಗ್ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ಬುಧವಾರ ವಜಾ ಮಾಡಿದೆ.

ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಆರ್‌. ಬಾನುಮತಿ ನೇತೃತ್ವದ ಮೂವರು ನ್ಯಾಯಮೂರ್ತಿಗಳ ಪೀಠವು, ರಾಷ್ಟ್ರಪತಿಯವರು ನ್ಯಾಯಾಲಯ ನೀಡಿರುವ ತೀರ್ಪುಗಳು ಸೇರಿದಂತೆ ಪ್ರಕರಣಕ್ಕೆ ಸಂಬಂಧಿಸಿದ ಎಲ್ಲ ವಿಷಯಗಳನ್ನು ಪರಿಗಣಿಸಿದ್ದಾರೆ. ಜತೆಗೆ, ಅಪರಾಧಿಯ ಕ್ರಿಮಿನಲ್‌ ಇತಿಹಾಸ, ಕುಟುಂಬದ ಆರ್ಥಿಕ ಸ್ಥಿತಿಯನ್ನು ಸಹ ಗಮನಿಸಿದ್ದಾರೆ ಎಂದು ಹೇಳಿದೆ.

ಜೈಲಿನಲ್ಲಿ ಸಮಸ್ಯೆ ಅನುಭವಿಸಿದ ಸಂಗತಿಯು ಕ್ಷಮಾದಾನದ ಅರ್ಜಿಗೆ ಬೆಂಬಲವಾಗಿ ಪರಿಗಣಿಸಲಾಗದು ಎಂದೂ ನ್ಯಾಯ ಪೀಠ ಅಭಿಪ್ರಾಯಪಟ್ಟಿದೆ.

ಈ ನಡುವೆ, ಗಲ್ಲು ಶಿಕ್ಷೆಗೆ ಗುರಿಯಾಗಿರುವ ಮತ್ತೊಬ್ಬ ಅಪರಾಧಿ ಅಕ್ಷಯ್‌ಕುಮಾರ್‌ ಬುಧವಾರ ಸುಪ್ರೀಂ ಕೊರ್ಟ್‌ಗೆ ಪರಿಹಾರಾತ್ಮಕ ಅರ್ಜಿ ಸಲ್ಲಿಸಿದ್ದು, ಗುರುವಾರ ವಿಚಾರಣೆಗೆ ಬರುವ ಸಾಧ್ಯತೆ ಇದೆ.

ಕ್ಷಮಾದಾನ ಅರ್ಜಿ ಸಲ್ಲಿಕೆ: ಇದೇ ಪ್ರಕರಣದ ಇನ್ನೊಬ್ಬ ಅಪರಾಧಿ ವಿನಯ್‌ ಕುಮಾರ್‌ ಶರ್ಮಾ, ಕ್ಷಮಾದಾನ ಕೋರಿ ರಾಷ್ಟ್ರಪತಿ ಅವರಿಗೆ ಬುಧವಾರ ಮನವಿ ಸಲ್ಲಿಸಿದ್ದಾನೆ.

ಹಿಂದೆಯೇ ತಿರಸ್ಕಾರ: ಅಪರಾಧಿಗಳಲ್ಲಿ ಇಬ್ಬರಾದ ಮುಖೇಶ್‌ ಹಾಗೂ ವಿನಯ್‌ ಕುಮಾರ್‌ ಅವರು ಈ ಹಿಂದೆ ಸಲ್ಲಿಸಿದ್ದ ಪರಿಹಾರಾತ್ಮಕ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ತಿರಸ್ಕರಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT