ನವದೆಹಲಿ:ನಿರ್ಭಯಾ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಸಲ್ಲಿಸಿರುವ ಅರ್ಜಿಯ ವಿಚಾರಣೆಯುಫೆ.11ರಂದು ನಡೆಯಲಿದೆ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ ಹೇಳಿದೆ.

ಅಪರಾಧಿಗಳಿಗೆ ಗಲ್ಲು ಶಿಕ್ಷೆ ವಿಧಿಸಲು ನೀಡಿರುವ ತಡೆ ಪ್ರಶ್ನಿಸಿಕೇಂದ್ರ ಸರ್ಕಾರವು ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್ ವಜಾಗೊಳಿಸಿತ್ತು. ಇದನ್ನು ಪ್ರಶ್ನಿಸಿ ಕೇಂದ್ರ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ.ಆರ್.ಭಾನುಮತಿ, ಅಶೋಕ್ ಭೂಷಣ್ ಮತ್ತು ಎ.ಎಸ್.ಬೋಪಣ್ಣ ಅವರ ಪೀಠವು ಅರ್ಜಿ ವಿಚಾರಣೆ ನಡೆಸಿತು.

‘ತಿಹಾರ್’ ಅರ್ಜಿ ವಜಾ: ನಾಲ್ವರು ಅಪರಾಧಿಗಳಿಗೆ ಶಿಕ್ಷೆ ವಿಧಿಸಲು ಹೊಸ ದಿನವನ್ನು ಗೊತ್ತುಪಡಿಸುವಂತೆ ತಿಹಾರ್ ಜೈಲು ಅಧಿಕಾರಿಗಳು ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್ ವಜಾಗೊಳಿಸಿದೆ. ಫೆ.5ರಂದು ತಮ್ಮ ಕಾನೂನು ಪ್ರಕ್ರಿಯೆಗಳನ್ನು ಒಂದು ವಾರದೊಳಗೆ ಪೂರ್ಣಗೊಳಿಸಬೇಕು ಎಂದು ಅಪರಾಧಿಗಳಿಗೆ ಕೋರ್ಟ್ ಸೂಚಿಸಿತ್ತು. ಇದನ್ನು ಉಲ್ಲೇಖಿಸಿದ ನ್ಯಾಯಮೂರ್ತಿ ಧರ್ಮೇಂದ್ರ ರಾಣಾ ಅವರು ಅರ್ಜಿ ವಜಾಗೊಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.