ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಿರ್ಭಯಾ: ಕೇಂದ್ರದ ಅರ್ಜಿ ವಿಚಾರಣೆ ಇಂದು

Last Updated 1 ಫೆಬ್ರುವರಿ 2020, 20:15 IST
ಅಕ್ಷರ ಗಾತ್ರ

ನವದೆಹಲಿ: ನಿರ್ಭಯಾ ಪ್ರಕರಣದ ಅಪರಾಧಿಗಳಿಗೆ ಗಲ್ಲು ಶಿಕ್ಷೆ ವಿಧಿಸಲು ತಡೆ ನೀಡಿರುವುದನ್ನು ಪ್ರಶ್ನಿಸಿ ಕೇಂದ್ರ ಸರ್ಕಾರ ಸಲ್ಲಿಸಿರುವ ಅರ್ಜಿ ವಿಚಾರಣೆಯು ಭಾನುವಾರ ನಡೆಯಲಿದೆ.

ಗಲ್ಲುಸಜೆಗೆ ದಿನ ನಿಗದಿಪಡಿಸಲು ಮನವಿ: ನಿರ್ಭಯಾ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಅಪರಾಧಿಗಳಿಗೆ ಗಲ್ಲುಶಿಕ್ಷೆ ಜಾರಿಗೊಳಿಸಲು ದಿನಾಂಕ ನಿಗದಿಪಡಿ
ಸಲು ಕೋರಿ ತಿಹಾರ್‌ ಕಾರಾಗೃಹದ ಅಧಿಕಾರಿಗಳು ಪಟಿಯಾಲಾ ಕೋರ್ಟ್‌ಗೆ ಮನವಿ ಸಲ್ಲಿಸಿದ್ದಾರೆ.

ಕ್ಷಮಾದಾನ ಕೋರಿ ಅಪರಾಧಿ ವಿನಯ್‌ ಕುಮಾರ್ ಸಲ್ಲಿಸಿದ್ದ ಅರ್ಜಿಯನ್ನು ರಾಷ್ಟ್ರಪತಿಗಳು ತಿರಸ್ಕರಿಸಿದ ಬಳಿಕ ಈ ಕ್ರಮಕೈಗೊಳ್ಳಲಾಗಿದೆ ಎಂದು ಡಿಜಿಪಿ (ಕಾರಾಗೃಹ) ಸಂದೀಪ್‌ ಗೋಯಲ್‌ ತಿಳಿಸಿದರು.

ಪ್ರಕರಣದ ನಾಲ್ವರು ಅಪರಾಧಿಗಳಿಗೆ ಈ ಮೊದಲು ಫೆಬ್ರುವರಿ 1ರಂದು ಬೆಳಿಗ್ಗೆ 6 ಗಂಟೆಗೆ ಗಲ್ಲು ವಿಧಿಸಬೇಕು ಎಂದು ಕೋರ್ಟ್‌ ಆದೇಶಿಸಿತ್ತು. ಆದರೆ, ದೆಹಲಿ ಕೋರ್ಟ್‌ ಅನಿರ್ದಿಷ್ಟ ಅವಧಿಗೆ ಇದನ್ನು ಮುಂದೂಡಿದೆ.

ಅಪರಾಧಿಗಳಿಗೆ ಕಾನೂನು ಪರಿಹಾರ ಕೋರುವ ಮಾರ್ಗಗಳು ಪೂರ್ಣ ಮುಗಿದಿಲ್ಲ ಎಂದು ಅಪರಾಧಿಗಳ ಪರ ವಕೀಲ ಎ.ಪಿ.ಸಿಂಗ್ ಪ್ರತಿಪಾದಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಗಲ್ಲು ಶಿಕ್ಷೆ ವಿಧಿಸುವುದು ಇನ್ನೂ ಅನಿಶ್ಚಿತವಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT