ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಿರ್ಭಯಾ ಪ್ರಕರಣ:ರಾಷ್ಟ್ರಪತಿ ನಿರ್ಧಾರ ಪ್ರಶ್ನಿಸಿದ ಅರ್ಜಿ ತುರ್ತು ವಿಚಾರಣೆ ನಾಳೆ

Last Updated 27 ಜನವರಿ 2020, 13:57 IST
ಅಕ್ಷರ ಗಾತ್ರ

ನವದೆಹಲಿ:ಕ್ಷಮಾದಾನದ ಮನವಿ ತಿರಸ್ಕರಿಸಿದ ರಾಷ್ಟ್ರಪತಿ ನಿರ್ಧಾರ ಪ್ರಶ್ನಿಸಿದ ಅರ್ಜಿಯನ್ನು ತುರ್ತು ವಿಚಾರಣೆಗೆ ತೆಗೆದುಕೊಳ್ಳಬೇಕು ಎಂದು ನಿರ್ಭಯಾ ಪ್ರಕರಣದ ಅಪರಾಧಿ ಮುಖೇಶ್‌ಕುಮಾರ್‌ ಸಿಂಗ್‌ ಸುಪ್ರೀಂ ಕೊರ್ಟ್‌ ಮೊರೆ ಹೋಗಿದ್ದಾನೆ.

ನ್ಯಾಯಮೂರ್ತಿ ಆರ್ ಬಾನುಮತಿ, ಅಶೋಕ್ ಭೂಷಣ್ ಮತ್ತು ಎ.ಎಸ್. ಬೋಪಣ್ಣ ಅವರ ನ್ಯಾಯಪೀಠವು ಮಂಗಳವಾರ ಮಧ್ಯಾಹ್ನ12.30ಕ್ಕೆ ಈ ಅರ್ಜಿ ವಿಚಾರಣೆ ನಡೆಸಲಿದೆ.

‘ಯಾರನ್ನಾದರೂ ಗಲ್ಲಿಗೇರಿಸಲಾಗುತ್ತದೆ ಎಂದಾದರೆ ಅದಕ್ಕಿಂತ ತುರ್ತು ವಿಚಾರ ಇನ್ನೊಂದಿಲ್ಲ’ ಎಂದು ಮುಖ್ಯ ನ್ಯಾಯಮೂರ್ತಿ ಎಸ್.ಎ.ಬೊಬಡೆ ನೇತೃತ್ವದ ನ್ಯಾಯಪೀಠ ಹೇಳಿದೆ. ನಿರ್ಭಯಾ ಪ್ರಕರಣದ ನಾಲ್ವರು ಅಪರಾಧಿಗಳನ್ನು ಫೆಬ್ರುವರಿ 1ರಂದು ಬೆಳಿಗ್ಗೆ 6 ಗಂಟೆಗೆ ಗಲ್ಲಿಗೇರಿಸುವಂತೆ ದೆಹಲಿಯ ಪಟಿಯಾಲಹೌಸ್ ನ್ಯಾಯಾಲಯ ಇತ್ತೀಚೆಗೆ ವಾರಂಟ್ ಜಾರಿ ಮಾಡಿತ್ತು.

ಮುಕೇಶ್ ಕ್ಷಮಾದಾನ ಅರ್ಜಿಯನ್ನು ರಾಷ್ಟ್ರಪತಿ ರಾಮನಾಥ ಕೋವಿಂದ್ ಜನವರಿ 17ರಂದು ತಿರಸ್ಕರಿಸಿದ್ದರು. ಇದನ್ನು ಪ್ರಶ್ನಿಸಿ ಜನವರಿ 25ರಂದು ಮುಕೇಶ್ ಪರ ವಕೀಲರು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT