ಭಾನುವಾರ, ಮಾರ್ಚ್ 29, 2020
19 °C

ಮರಣದಂಡನೆಗೆ ಮುನ್ನ ಅಂತಿಮ ಇಚ್ಛೆ ವ್ಯಕ್ತಪಡಿಸಿಲ್ಲ ನಿರ್ಭಯಾ ಅತ್ಯಾಚಾರಿಗಳು

ಪಿಟಿಐ Updated:

ಅಕ್ಷರ ಗಾತ್ರ : | |

nirbhaya case

ದೆಹಲಿ: ದೆಹಲಿಯ ತಿಹಾರ್ ಜೈಲಿನಲ್ಲಿ  ಶುಕ್ರವಾರ ಬೆಳಗ್ಗೆ ನಿರ್ಭಯಾ ಅತ್ಯಾಚಾರಿಗಳಿಗೆ ಮರಣದಂಡನೆ ವಿಧಿಸಲಾಗಿದೆ. ಗಲ್ಲಿಗೇರಿಸುವ ಮುನ್ನ ಅಂತಿಮ ಇಚ್ಛೆ ಏನು ಎಂದು  ಕೇಳಿದರೆ ಇವರಲ್ಲಿ ಯಾರೊಬ್ಬರೂ ತಮ್ಮ ಬಯಕೆ ವ್ಯಕ್ತಪಡಿಸಿಲ್ಲ.

ಜೈಲಿನಲ್ಲಿರುವಾಗ ಇವರು ದುಡಿದ ಹಣವನ್ನು ಅವರ ಕುಟುಂಬಕ್ಕೆ ನೀಡಲಾಗುವುದು. ಇದರ ಜತೆಗೆ ಅವರ ಬಟ್ಟೆ ಮತ್ತು ಇತರ ವಸ್ತುಗಳನ್ನು ಕುಟುಂಬದವರಿಗೆ ನೀಡಲಾಗುವುದು. ಮುಕೇಶ್ ಸಿಂಗ್ (32), ಪವನ್ ಗುಪ್ತಾ (25, ವಿನಯ್ ಶರ್ಮಾ (26) ಮತ್ತು ಅಕ್ಷಯ್ ಕುಮಾರ್ ಸಿಂಗ್ (31)- ನಿರ್ಭಯಾ ಅತ್ಯಾಚಾರ ಪ್ರಕರಣದ ನಾಲ್ವರು ಅಪರಾಧಿಗಳನ್ನು 5.30ಕ್ಕೆ ಗಲ್ಲಿಗೇರಿಸಲಾಗಿದೆ.

2012 ಡಿಸೆಂಬರ್ 16ರಂದು ದೆಹಲಿಯಲ್ಲಿ ಚಲಿಸುತ್ತಿದ್ದ ಬಸ್ಸಿನಲ್ಲಿ 23ರ ಹರೆಯದ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿ ಹತ್ಯೆ ಮಾಡಿದ ಪ್ರಕರಣದಲ್ಲಿ ಇವರಿಗೆ ಮರಣ ದಂಡನೆ ವಿಧಿಸಲಾಗಿದೆ. ಅತ್ಯಾಚಾರಕ್ಕೊಳಗಾದ ಯುವತಿಯು 13 ದಿನಗಳ ನಂತರ ಸಾವಿಗೀಡಾಗಿದ್ದಳು. ಅಪರಾಧಿಗಳಿಗೆ ಗಲ್ಲು ಶಿಕ್ಷೆ ತೀರ್ಪು ಪ್ರಕಟವಾಗಿದ್ದರೂ ಜನವರಿ ತಿಂಗಳಿನಿಂದ ಮೂರು ಬಾರಿ ಗಲ್ಲಿಗೇರಿಸುವ ದಿನಾಂಕ ಬದಲಾಗಿತ್ತು. ಅಪರಾಧಿಗಳು ಕಾನೂನಿನ ಪ್ರಕ್ರಿಯೆಗಳನ್ನು ಪೂರೈಸಲು ತೆಗೆದುಕೊಂಡ ಸಮಯದಿಂದಾಗಿ ದಿನಾಂಕ ಬದಲಾಗುತ್ತಲೇ ಇತ್ತು.

ದಕ್ಷಿಣ ಏಷ್ಯಾದಲ್ಲಿಯೇ ಅತೀ ದೊಡ್ಡ ಕಾರಾಗೃಹವಾಗಿರುವ ತಿಹಾರ್ ಜೈಲಿನಲ್ಲಿ ಇದೇ ಮೊದಲ ಬಾರಿಗೆ ನಾಲ್ವರು ಅಪರಾಧಿಗಳನ್ನು ಒಟ್ಟಿಗೆ ಗಲ್ಲಿಗೇರಿಸಲಾಗಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು