ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಿರ್ಭಯಾ ಪ್ರಕರಣ: ಅಪರಾಧಿಗಳ ಪರ ವಕೀಲರಿಂದ ದೆಹಲಿ ಕೋರ್ಟ್‌ಗೆ ಮತ್ತೆ ಅರ್ಜಿ

ಜೈಲು ಅಧಿಕಾರಿಗಳ ವಿರುದ್ಧ ಆರೋಪ
Last Updated 24 ಜನವರಿ 2020, 9:53 IST
ಅಕ್ಷರ ಗಾತ್ರ

ನವದೆಹಲಿ:ನಿರ್ಭಯಾ ಅತ್ಯಾಚಾರ, ಕೊಲೆ ಪ್ರಕರಣದಲ್ಲಿ ಗಲ್ಲು ಶಿಕ್ಷೆಗೆ ಗುರಿಯಾಗಿರುವ ನಾಲ್ವರು ಅಪರಾಧಿಗಳ ಪೈಕಿ ಇಬ್ಬರ ವಕೀಲರು ಮತ್ತೆ ದೆಹಲಿಯಪಟಿಯಾಲಹೌಸ್ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ತಿಹಾರ್ ಜೈಲು ಅಧಿಕಾರಿಗಳು ಕೆಲವು ದಾಖಲೆಗಳನ್ನು ಹಸ್ತಾಂತರಿಸಲು ವಿಳಂಬ ಮಾಡುತ್ತಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

ಅಪರಾಧಿ ಅಕ್ಷಯ್ ಕುಮಾರ್ ಸಿಂಗ್ ಮತ್ತು ಪವನ್ ಸಿಂಗ್‌ ಪರ ಪರಿಹಾರಾತ್ಮಕ ಅರ್ಜಿ ಸಲ್ಲಿಸಲು ಬೇಕಿರುವ ದಾಖಲೆಗಳನ್ನು ಜೈಲು ಅಧಿಕಾರಿಗಳು ಇನ್ನೂ ನೀಡಿಲ್ಲ ಎಂದು ವಕೀಲ ಎ.ಪಿ.ಸಿಂಗ್ ಹೇಳಿದ್ದಾರೆ. ಅರ್ಜಿ ಶನಿವಾರ ವಿಚಾರಣೆಗೆ ಬರುವ ಸಾಧ್ಯತೆ ಇದೆ.

ಇನ್ನಿಬ್ಬರು ಅಪರಾಧಿಗಳಾದ ವಿನಯ್ ಕುಮಾರ್ ಶರ್ಮಾ ಮತ್ತು ಮುಕೇಶ್ ಸಿಂಗ್ ಪರಿಹಾರಾತ್ಮಕ ಅರ್ಜಿಯನ್ನು ಇತ್ತೀಚೆಗೆ ಸುಪ್ರೀಂ ಕೋರ್ಟ್‌ ತಿರಸ್ಕರಿಸಿತ್ತು.

ನಿರ್ಭಯಾ ಪ್ರಕರಣದ ಅಪರಾಧಿಗಳ ಗಲ್ಲು ಶಿಕ್ಷೆಯನ್ನು ಜನವರಿ 22ರಂದು ಜಾರಿಗೊಳಿಸುವಂತೆಈ ಹಿಂದೆ ನ್ಯಾಯಾಲಯ ವಾರಂಟ್ ಜಾರಿ ಮಾಡಿತ್ತು. ಆದರೆ, ಅಪರಾಧಿಗಳ ಪೈಕಿ ಇಬ್ಬರು ಕ್ಷಮಾದಾನ ಅರ್ಜಿ ಸಲ್ಲಿಸಿದ್ದರಿಂದ ದಿನಾಂಕವನ್ನು ಫೆಬ್ರುವರಿ 1ಕ್ಕೆಮುಂದೂಡಲಾಗಿತ್ತು. ಈ ಮಧ್ಯೆ,ಗಲ್ಲುಶಿಕ್ಷೆಗೆ ಗುರಿಯಾದವರು ಕ್ಷಮಾದಾನ ಅರ್ಜಿ ಸಲ್ಲಿಸಲು ಬಯಸುವುದಾದರೆ, ಶಿಕ್ಷೆ ಜಾರಿಯಾದ ದಿನಾಂಕದಿಂದ ಏಳು ದಿನಗಳ ಒಳಗಾಗಿ ಅರ್ಜಿ ಸಲ್ಲಿಸುವುದನ್ನು ಕಡ್ಡಾಯಗೊಳಿಸಬೇಕು ಎಂದು ಮನವಿ ಮಾಡಿ ಕೇಂದ್ರ ಗೃಹ ಸಚಿವಾಲಯ ಸುಪ್ರೀಂ ಕೋರ್ಟ್‌ಗೆ ಮನವಿ ಮಾಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT