ಬುಧವಾರ, ಏಪ್ರಿಲ್ 1, 2020
19 °C

ನಿರ್ಭಯಾ: ಅಪರಾಧಿ ಸ್ಥಿತಿ ಬಗ್ಗೆ ವಿವರಣೆ ನೀಡುವಂತೆ ದೆಹಲಿ ನ್ಯಾಯಾಲಯ ಸೂಚನೆ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ನಿರ್ಭಯಾ ಪ್ರಕರಣದ ಅಪರಾಧಿ ವಿನಯ್‌ಕುಮಾರ್‌ ಶರ್ಮಾಗೆ ಚಿಕಿತ್ಸೆ ನೀಡುವ ಕುರಿತು ವಿವರಣೆ ನೀಡುವಂತೆ ದೆಹಲಿ ನ್ಯಾಯಾಲಯವು ತಿಹಾರ್‌ ಜೈಲು ಅಧಿಕಾರಿಗಳಿಗೆ ಸೂಚಿಸಿದೆ. 

ಅಪರಾಧಿ ಮಾನಸಿಕ ಅಸ್ವಸ್ಥತೆಗೆ ಒಳಗಾಗಿದ್ದಾನೆ. ಅಲ್ಲದೆ, ತಲೆ ಮತ್ತು ತೋಳಿಗೆ ಗಾಯಗಳಾಗಿದ್ದು, ಚಿಕಿತ್ಸೆ ಒದಗಿಸುವಂತೆ ಕೋರಿ ಶರ್ಮಾ ನ್ಯಾಯಾಲಯಕ್ಕೆ ಮನವಿ ಮಾಡಿದ್ದ. ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಧರ್ಮೇಂದರ್‌ ರಾಣಾ ಅವರು, ಶನಿವಾರ ವಿವರಣೆ ನೀಡುವಂತೆ ಜೈಲು ಅಧಿಕಾರಿಗಳಿಗೆ ಸೂಚಿಸಿದ್ದಾರೆ. 

ಜೈಲು ಗೋಡೆಗೆ ತಲೆಯನ್ನು ಚಚ್ಚಿಕೊಳ್ಳುವುದರ ಮೂಲಕ ಗಾಯಗೊಂಡಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ತನ್ನನ್ನು ನೋಡಲು ಬಂದ ತಾಯಿಯನ್ನು ಗುರುತಿಸಲು ವಿಫಲನಾಗಿದ್ದು, ಆತನ ತಲೆಗೂ ಪೆಟ್ಟಾಗಿದೆ. ಚಿಕಿತ್ಸೆ ನೀಡಲು ಅವಕಾಶ ನೀಡಬೇಕು ಎಂದು ಅಪರಾಧಿ ಪರ ವಕೀಲರು ಹೇಳಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು