ಶನಿವಾರ, ಫೆಬ್ರವರಿ 22, 2020
19 °C

ನಿರ್ಭಯಾ ಪ್ರಕರಣ: ಪರಿಹಾರಾತ್ಮಕ ಅರ್ಜಿ ಸಲ್ಲಿಸಿದ ಅಪರಾಧಿ ಅಕ್ಷಯ್ ಕುಮಾರ್ ಸಿಂಗ್

ಏಜೆನ್ಸೀಸ್ Updated:

ಅಕ್ಷರ ಗಾತ್ರ : | |

Supreme court

ನವದೆಹಲಿ: ನಿರ್ಭಯಾ ಪ್ರಕರಣದ ನಾಲ್ವರು ಅಪರಾಧಿಗಳ ಪೈಕಿ ಒಬ್ಬನಾದ ಅಕ್ಷಯ್ ಕುಮಾರ್ ಸಿಂಗ್ ಸುಪ್ರೀಂ ಕೋರ್ಟ್‌ಗೆ ಪರಿಹಾರಾತ್ಮಕ ಅರ್ಜಿ ಸಲ್ಲಿಸಿದ್ದಾನೆ ಎಂದು ಕೆಲವು ಮಾಧ್ಯಮಗಳು ವರದಿ ಮಾಡಿವೆ.

ಕ್ಷಮಾದಾನ ಅರ್ಜಿಯನ್ನು ರಾಷ್ಟ್ರಪತಿಯು ತಿರಸ್ಕರಿಸಿರುವುದನ್ನು ಪ್ರಶ್ನಿಸಿ ಇನ್ನೊಬ್ಬ ಅಪರಾಧಿ ಮುಖೇಶ್‌ ಕುಮಾರ್‌ ಸಿಂಗ್‌ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಆರ್.ಭಾನುಮತಿ ನೇತೃತ್ವದ ನ್ಯಾಯಪೀಠವು ಮಂಗಳವಾರ ನಡೆಸಿತ್ತು. ಮುಖೇಶ್‌ ಕುಮಾರ್‌ಗೆ ತಿಹಾರ್ ಜೈಲಿನಲ್ಲಿ ಲೈಂಗಿಕ ಕಿರುಕುಳ ನೀಡಲಾಗಿತ್ತು ಎಂದು ಆತನ ಪರ ವಕೀಲರು ವಿಚಾರಣೆ ವೇಳೆ ಸುಪ್ರೀಂ ಕೋರ್ಟ್‌ಗೆ ತಿಳಿಸಿದ್ದರು. ಆದರೆ, ‘ಜೈಲಿನಲ್ಲಿ ಅನುಚಿತವಾಗಿ ನಡೆಸಿಕೊಳ್ಳಲಾಗಿದೆ’ ಎಂಬ ಕಾರಣ, ಇಂಥ ಗಂಭೀರ ಅಪರಾಧದಲ್ಲಿ ಕ್ಷಮೆಗೆ ಮಾನದಂಡವಲ್ಲ’ ಎಂದು ಸಾಲಿಸಿಟರ್‌ ಜನರಲ್ ತುಷಾರ್ ಮೆಹ್ತಾ ವಾದಿಸಿದ್ದರು. ತೀರ್ಪು ಇಂದು ಪ್ರಕಟಗೊಳ್ಳಲಿದೆ.

ಅಪರಾಧಿಗಳನ್ನು ಫೆಬ್ರುವರಿ 1ರಂದು ಬೆಳಿಗ್ಗೆ 6 ಗಂಟೆಗೆ ಗಲ್ಲಿಗೇರಿಸುವಂತೆ ದೆಹಲಿ ನ್ಯಾಯಾಲಯ ಇತ್ತೀಚೆಗೆ ವಾರಂಟ್ ಜಾರಿ ಮಾಡಿತ್ತು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು