ಶನಿವಾರ, ಏಪ್ರಿಲ್ 4, 2020
19 °C

ನಿರ್ಭಯಾ ಅತ್ಯಾಚಾರಿ ಪವನ್‌ ಗುಪ್ತ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ: ನಿರ್ಭಯಾ ಅತ್ಯಾಚಾರ ಪ್ರಕರಣದ ಅಪರಾಧಿ ಪವನ್‌ ಕುಮಾರ್‌ ಗುಪ್ತಾ ಸಲ್ಲಿಸಿದ್ದ ನ್ಯಾಯ ಪರಿಹಾರಾತ್ಮಕ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ಸೋಮವಾರ ವಜಾಗೊಳಿಸಿದೆ.  ಅಲ್ಲದೆ, ತನಗೆ ವಿಧಿಸಲಾಗಿರುವ ಮರಣದಂಡನೆ ಶಿಕ್ಷೆಗೆ ತಡೆ ನೀಡಬೇಕೆಂಬ ಕೋರಿಕೆಯನ್ನೂ ಸುಪ್ರೀಂ ಕೋರ್ಟ್‌ ನಿರಾಕರಿಸಿದೆ.  

ಪ್ರಕರಣ ನಡೆದಾಗ ತಾನು ಅಪ್ರಾಪ್ತನಾಗಿದ್ದೆ ಎಂದು ವಾದಿಸುತ್ತಿರುವ ಪವನ್‌ ಗುಪ್ತಾ ಇದೇ ಆಧಾರದಲ್ಲಿ ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿರುವ ಪರಿಹಾರಾತ್ಮಕ ಅರ್ಜಿಯ ವಿಚಾರಣೆ ಸೋಮವಾರ ನಿಗದಿಯಾಗಿತ್ತು. 

ನ್ಯಾಯಮೂರ್ತಿಗಳಾದ ಎನ್‌.ವಿ.ರಮಣ, ಅರುಣ್‌ ಮಿಶ್ರಾ, ಆರ್‌.ಎಫ್‌. ನರಿಮನ್‌, ಆರ್‌. ಭಾನುಮತಿ ಮತ್ತು ಆಶೋಕ್‌ ಭೂಷಣ್‌ ಅವರನ್ನೊಳಗೊಂಡಿರುವ ಪೀಠ ಅಪರಾಧಿಯ ಶಿಕ್ಷೆಯನ್ನು ಮರು ಪರಿಶೀಲನೆ ಮಾಡಲು ಸಾಧ್ಯವಿಲ್ಲ ಎಂದು ಹೇಳಿತು. 
ಗಲ್ಲುಶಿಕ್ಷೆಯನ್ನು ಜೀವಾವಧಿ ಶಿಕ್ಷೆಗೆ ಇಳಿಸಬೇಕೆಂದು ಪವನ್‌ ಗುಪ್ತಾ ಕೋರಿದ್ದಾನೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು