ಶನಿವಾರ, ಫೆಬ್ರವರಿ 22, 2020
19 °C

ನಿರ್ಭಯಾ: ಹೊಸದಾಗಿ ಡೆತ್‌ ವಾರಂಟ್ ಕೋರಿದ ಜೈಲು ಸಿಬ್ಬಂದಿ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ನಿರ್ಭಯಾ ಪ್ರಕರಣದ ಅಪರಾಧಿಗಳಿಗೆ ಗಲ್ಲುಶಿಕ್ಷೆ ವಿಧಿಸಲು ತಿಹಾರ್ ಜೈಲಿನ ಅಧಿಕಾರಿಗಳು ಹೊಸದಾಗಿ ಡೆತ್ ವಾರೆಂಟ್ ನೀಡುವಂತೆ ಕೋರಿ ದೆಹಲಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ.

ಅರ್ಜಿ ಸಲ್ಲಿಸಿದ ಬಳಿಕ, ದೆಹಲಿಯ ನ್ಯಾಯಾಲಯದ ಹೆಚ್ಚುವರಿ ಸೆಷೆನ್ಸ್ ನ್ಯಾಯಾಧೀಶ ಧರ್ಮೇಂದ್ರ ರಾಣಾ, ಈ ಕುರಿತು ನಾಲ್ವರು ಅಪರಾಧಿಗಳಿಂದ ಶುಕ್ರವಾರದೊಳಗೆ ಪ್ರತಿಕ್ರಿಯೆ ಸಲ್ಲಿಸುವಂತೆ ಸೂಚಿಸಿದ್ದಾರೆ. 

ನಿರ್ಭಯಾ ಪ್ರಕರಣದ ಅಪರಾಧಿಗಳಿಗೆ ಗಲ್ಲುಶಿಕ್ಷೆ ವಿಧಿಸುವುದನ್ನು ವಿಚಾರಣಾ ನ್ಯಾಯಾಲಯ ಜನವರಿ 31ರಂದು ತಡೆ ಹಿಡಿದಿತ್ತು. ಅಪರಾಧಿಗಳಾದ ಮುಕೇಶ್ ಕುಮಾರ್ ಸಿಂಗ್‌, ಪವನ್ ಗುಪ್ತ, ವಿನಯ್‌ಕುಮಾರ್ ಶರ್ಮಾ ಮತ್ತು ಅಕ್ಷಯ್ ಕುಮಾರ್ ಅವರನ್ನು ತಿಹಾರ್ ಜೈಲಿನಲ್ಲಿರಿಸಲಾಗಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು