ನ್ಯೂಯಾರ್ಕ್: ವಿಶ್ವದ 100 ಅತ್ಯಂತ ಪ್ರಭಾವಿ ಮಹಿಳೆಯರಲ್ಲಿ ಭಾರತದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಒಬ್ಬರಾಗಿದ್ದಾರೆ.

ಫೋರ್ಬ್ಸ್ ನಿಯತಕಾಲಿಕೆ ಈ ಪಟ್ಟಿ ಬಿಡುಗಡೆ ಮಾಡಿದ್ದು, ನಿರ್ಮಲಾ ಸೀತಾರಾಮನ್ ಅವರು 34ನೇ ಸ್ಥಾನ ಪಡೆದುಕೊಂಡಿದ್ದಾರೆ.

ಜರ್ಮನಿಯ ಚಾನ್ಸಲರ್ ಏಂಜೆಲಾ ಮರ್ಕೆಲ್ ಸತತ ಒಂಬತ್ತನೇ ಬಾರಿಗೆ ಈ ಪಟ್ಟಿಯ ಮೊದಲ ಸ್ಥಾನದಲ್ಲಿದ್ದಾರೆ. ಯುರೋಪಿಯನ್ ಸೆಂಟ್ರಲ್ ಬ್ಯಾಂಕ್ ಅಧ್ಯಕ್ಷೆ ಕ್ರಿಸ್ಟಿನ್ ಲಗಾರ್ಡೆ ಮತ್ತು ಅಮೆರಿಕದ ಜನಪ್ರತಿನಿಧಿಗಳ ಸಭೆಯ ಸ್ಪೀಕರ್ ನ್ಯಾನ್ಸಿ ಪೆಲೋಸಿ ಮೂರನೇ ಸ್ಥಾನ ಪಡೆದಿದ್ದಾರೆ.

ನೂರನೇ ಸ್ಥಾನದಲ್ಲಿ ಹವಾಮಾನ ಬದಲಾವಣೆ ವಿರುದ್ಧ ಹೋರಾಟ ಮಾಡುತ್ತಿರುವ ಗ್ರೆಟಾ ಥನ್ಬರ್ಗ್ ಇದ್ದಾರೆ.

ಎಚ್ಸಿಎಲ್ ಕಾರ್ಪೊರೇಷನ್ ಸಿಇಒ ಮತ್ತು ವ್ಯವಸ್ಥಾಪಕ ನಿರ್ದೇಶಕಿ ರೋಷನಿ ನಾಡರ್ ಮಲ್ಹೋತ್ರಾ ಮತ್ತು ಬಯೋಕಾನ್ ಸಂಸ್ಥಾಪಕಿ ಕಿರಣ್ ಮಜುಂದಾರ್ ಶಾ ಪಟ್ಟಿಯಲ್ಲಿ ಸ್ಥಾನ ಪಡೆದಿರುವ ಭಾರತೀಯರಾಗಿದ್ದಾರೆ.

54ನೇ ಸ್ಥಾನದಲ್ಲಿರುವ ಮಲ್ಹೋತ್ರಾ ಅವರು, ಕಂಪನಿಯ ಉನ್ನತಿಯಲ್ಲಿ ತಮ್ಮದೇ ಆದ ಕೊಡುಗೆ ನೀಡಿದ್ದಾರೆ. ಕಿರಣ್ ಮಜುಂದಾರ್ ಶಾ ಅವರು ಪಟ್ಟಿಯಲ್ಲಿ 65ನೇ ಸ್ಥಾನದಲ್ಲಿದ್ದಾರೆ. ಬಾಂಗ್ಲಾದೇಶದ ಪ್ರಧಾನಿ ಶೇಕ್ ಹಸೀನ ಅವರು ಪಟ್ಟಿಯಲ್ಲಿ 29ನೇ ಸ್ಥಾನದಲ್ಲಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.