ಬುಧವಾರ, ಸೆಪ್ಟೆಂಬರ್ 18, 2019
26 °C

ಬ್ಯಾಂಕುಗಳ ವಿಲೀನ: ನೌಕರರಿಗೆ ಭಯಬೇಡ- ಸಚಿವೆ ನಿರ್ಮಲಾ ಸೀತಾರಾಮನ್

Published:
Updated:

ನವದೆಹಲಿ: ರಾಷ್ಟ್ರೀಕೃತ ಬ್ಯಾಂಕುಗಳ ವಿಲೀನ ಪ್ರಕ್ರಿಯೆಯಲ್ಲಿ ಒಬ್ಬನೇ ಒಬ್ಬ ನೌಕರನೂ ಕೆಲಸ ಕಳೆದುಕೊಳ್ಳುವುದಿಲ್ಲ, ಈ ಕುರಿತು ಆತಂಕಬೇಡ ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವೆ, ಬಂಡವಾಳ ಹೂಡಿಕೆ, ಆರ್ಥಿಕ ಸ್ಥಿತಿ ಸುಧಾರಣೆಗಾಗಿ 10 ಬ್ಯಾಂಕುಗಳನ್ನು ನಾಲ್ಕು ಬ್ಯಾಂಕುಗಳನ್ನಾಗಿ ಮಾಡಲಾಗಿದೆ. ಇದರಿಂದ ಬ್ಯಾಂಕ್ ನೌಕರರು ಹುದ್ದೆ ಕಳೆದುಕೊಳ್ಳುತ್ತಾರೆ ಎಂಬುದು ಸುಳ್ಳು ಎಂದು ಸ್ಪಷ್ಟಪಡಿಸಿದ್ದಾರೆ.

ಕಳೆದ ಶುಕ್ರವಾರ ಬ್ಯಾಂಕುಗಳ ವಿಲೀನ ಪ್ರಕ್ರಿಯೆ ಕೈಗೆತ್ತಿಕೊಳ್ಳಲಾಗಿದೆ ಎಂದು ಪ್ರಕಟಿಸಲಾಗಿತ್ತು. ಈ ಬೆಳವಣಿಗೆ ಕುರಿತು ಅಖಿಲ ಭಾರತ ಬ್ಯಾಂಕ್ ನೌಕರರ ಸಂಘಟನೆ ಅಭಿಪ್ರಾಯ ವ್ಯಕ್ತಪಡಿಸಿ, ಈ ಪ್ರಕ್ರಿಯೆಯಿಂದಾಗಿ ಬ್ಯಾಂಕುಗಳಲ್ಲಿ ನೌಕರರು ಕೆಲಸ ಕಳೆದುಕೊಳ್ಳುತ್ತಾರೆ ಎಂದು ಆತಂಕ ವ್ಯಕ್ತಪಡಿಸಿತ್ತು.

ನಾನು ಭರವಸೆ ನೀಡುತ್ತೇನೆ. ಕೆಲಸ ಕಳೆದುಕೊಳ್ಳುವ ಭಯಬೇಡ, ನಾನು ಕಳೆದ ಶುಕ್ರವಾರ ಹೇಳಿದ ಹೇಳಿಕೆಯನ್ನು ಮತ್ತೊಮ್ಮೆ ನೆನಪಿಸಿಕೊಳ್ಳಿ, ಆಗ ನಾನು ಕೇವಲ ಬ್ಯಾಂಕುಗಳ ವಿಲೀನ ಪ್ರಕ್ರಿಯೆ ಕುರಿತು ಮಾತ್ರ ಹೇಳಿದ್ದೆ. ಯಾವುದೇ ನೌಕರರನ್ನೂ ತೆಗೆದುಹಾಕುವುದಿಲ್ಲ ಎಂದರು.

Post Comments (+)