ಮಂಗಳವಾರ, ಮಾರ್ಚ್ 9, 2021
31 °C

ಅಂತರರಾಜ್ಯ ರಸ್ತೆ ತಡೆ ತೆರವಿಗೆ ನಿತಿನ್‌ ಗಡ್ಕರಿ ಸೂಚನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ: ಟ್ರಕ್‌ ಹಾಗೂ ಸರಕು ಹೊತ್ತ ವಾಹನಗಳ ಸುಗಮ ಸಂಚಾರಕ್ಕಾಗಿ ಅಂತರರಾಜ್ಯ ರಸ್ತೆಗಳನ್ನು ಬಂದ್‌ ಮಾಡಿರುವುದನ್ನು ತೆರವುಗೊಳಿಸಬೇಕು ಎಂದು ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್‌ ಗಡ್ಕರಿ ಎಲ್ಲ ರಾಜ್ಯಗಳನ್ನು ಮಂಗಳವಾರ ಒತ್ತಾಯಿಸಿದ್ದಾರೆ.

ವಿವಿಧ ರಾಜ್ಯಗಳ ಸಾರಿಗೆ ಸಚಿವರೊಂದಿಗೆ ವಿಡಿಯೊ ಕಾನ್ಫರೆನ್ಸ್‌ ಮೂಲಕ ಸಂವಾದ ನಡೆಸಿದ ಅವರು, ‘ಟ್ರಕ್‌ ಚಾಲಕರು, ಕೂಲಿಕಾರ್ಮಿಕರು ಆರೋಗ್ಯ ಮಾರ್ಗಸೂಚಿಗಳನ್ನು ಪಾಲಿಸಬೇಕು. ಸಮರ್ಪಕ ಅಂತರ ಕಾಯ್ದುಕೊಳ್ಳಬೇಕು, ಮಾಸ್ಕ್‌ ಧರಿಸುವುದು ಹಾಗೂ ಸ್ಯಾನಿಟೈಜರ್‌ ಬಳಸುತ್ತಾರೆಯೇ ಎಂಬುದನ್ನು ಖಾತರಿಪಡಿಸಿಕೊಳ್ಳಬೇಕು’ ಎಂದು ಸಲಹೆ ನೀಡಿದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು