ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಾವಿನ ಸಂಖ್ಯೆ 124 ಕ್ಕೆ ಏರಿಕೆ: ನಿತೀಶ್‌ ವಿರುದ್ಧ ಪ್ರತಿಭಟನೆ

ಆರೋಗ್ಯ ಸಚಿವರ ರಾಜೀನಾಮೆಗೆ ಆಗ್ರಹ
Last Updated 18 ಜೂನ್ 2019, 20:00 IST
ಅಕ್ಷರ ಗಾತ್ರ

ಪಟ್ನಾ: ಎಇಎಸ್‌ ಕಾಯಿಲೆಯಿಂದ ಮಕ್ಕಳು ಸಾವನ್ನಪ್ಪುತ್ತಿರುವ ಹಿನ್ನೆಲೆಯಲ್ಲಿ ಮುಜಪ್ಫರ್‌ಪುರಕ್ಕೆ ಮಂಗಳವಾರ ಭೇಟಿ ನೀಡಿದ ಬಿಹಾರ ಮುಖ್ಯಮಂತ್ರಿ ನಿತೀಶ್‌ಕುಮಾರ್‌, ಜನರಿಂದ ಪ್ರತಿಭಟನೆ ಎದುರಿಸಬೇಕಾಯಿತು.

ಮಕ್ಕಳಲ್ಲಿ ರೋಗ ಕಾಣಿಸಿಕೊಂಡು 17 ದಿನಗಳು ಕಳೆದ ಬಳಿಕ ಮುಖ್ಯಮಂತ್ರಿ ಭೇಟಿ ನೀಡಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ಪ್ರತಿಭಟನಕಾರರು ‘ಮರಳಿ ಹೋಗಿ’ ಎಂದು ಘೋಷಣೆ ಕೂಗಿದರು. ‘ಮುಖ್ಯಮಂತ್ರಿಗಳು ಆಸ್ಪತ್ರೆಗೆ ಮೊದಲೇ ಭೇಟಿ ನೀಡಿದ್ದರೆ ವೈದ್ಯರು ಹಾಗೂ ಅಧಿಕಾರಿಗಳು ಹೆಚ್ಚು ಮುತುವರ್ಜಿಯಿಂದ ಕೆಲಸ ನಿರ್ವಹಿಸುತ್ತಿದ್ದರು’ ಎಂದು ಹೇಳಿದ್ದಾರೆ.

ಶ್ರೀಕೃಷ್ಣ ಆಸ್ಪತ್ರೆಗೆ ಉಪ ಮುಖ್ಯಮಂತ್ರಿ ಸುಶೀಲ್‌ ಕುಮಾರ್‌ ಮೋದಿ ಅವರೊಂದಿಗೆ ಭೇಟಿ ನೀಡಿದ ಮುಖ್ಯಮಂತ್ರಿ, ರೋಗ ಬಾಧಿಸಿರುವ ಮಕ್ಕಳನ್ನು ಹಾಗೂ ಪಾಲಕರನ್ನು ಭೇಟಿಯಾದರು.

‘ಮಕ್ಕಳಿಗೆ ನೀಡುತ್ತಿರುವ ಚಿಕಿತ್ಸೆಯ ಬಗ್ಗೆ ನಿತೀಶ್‌ ಅವರು ತೃಪ್ತಿ ವ್ಯಕ್ತಪಡಿಸಿದ್ದಾರೆ’ ಎಂದು ಆಸ್ಪತ್ರೆಯ ಅಧಿಕಾರಿಗಳು ತಿಳಿಸಿದ್ದಾರೆ.

ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗವು ಕೇಂದ್ರ ಆರೋಗ್ಯ ಸಚಿವಾಲಯಕ್ಕೆ ಮತ್ತು ಬಿಹಾರ ಸರ್ಕಾರಕ್ಕೆ ಸೋಮವಾರ ನೋಟಿಸ್‌ ಜಾರಿ ಮಾಡಿತ್ತು.

ರಾಜೀನಾಮೆಗೆ ಆಗ್ರಹ

ನಿತೀಶ್‌ ಕುಮಾರ್‌ ಅವರು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ವಿವಿಧ ಸಂಘಟನೆಗಳ ಕಾರ್ಯಕರ್ತರು ನವದೆಹಲಿಯ ಬಿಹಾರ ಭವನದ ಮುಂಭಾಗದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು.

ಕೇಂದ್ರ ಸರ್ಕಾರ ಕೂಡ ಈ ಬಗ್ಗೆ ನಿರ್ಲಕ್ಷ್ಯ ವಹಿಸಿದೆ ಎಂದೂ ಆರೋಪಿಸಿರುವ ಪ್ರತಿಭಟನಾಕಾರರು, ಬಿಹಾರದ ಆರೋಗ್ಯ ಸಚಿವ ಮಂಗಲ್‌ ಪಾಂಡೆ ಅವರ ರಾಜೀನಾಮೆಗೂ ಆಗ್ರಹಿಸಿದ್ದಾರೆ.

ಮೃತ ಮಕ್ಕಳ ಕುಟುಂಬದವರಿಗೆ ಪರಿಹಾರ ನೀಡಬೇಕು ಎಂದೂಒತ್ತಾಯಿಸಿದ್ದಾರೆ.

‘ಜನರು ದೂರಿಲ್ಲ..’

‘ಮುಖ್ಯಮಂತ್ರಿ ನಿತೀಶ್‌ಕುಮಾರ್‌ ಹಾಗೂ ಸಂಪುಟ ಸಹೋದ್ಯೋಗಿಗಳು, ಆಸ್ಪತ್ರೆಯಲ್ಲಿ ದಾಖಲಿಸಿರುವ ಪ್ರತಿಯೊಬ್ಬರ ಬಳಿ ತೆರಳಿ ಆರೋಗ್ಯ ವಿಚಾರಿಸಿದ್ದಾರೆ’ ಎಂದು ಸರ್ಕಾರದ ಮುಖ್ಯ ಕಾರ್ಯದರ್ಶಿ ದೀಪಕ್‌ ಕುಮಾರ್‌ ತಿಳಿಸಿದರು.

ಮುಜಾಫ್ಫರಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಆಸ್ಪತ್ರೆಯಲ್ಲಿನ ವ್ಯವಸ್ಥೆ ಬಗ್ಗೆ ಯಾರೂ ದೂರಿಲ್ಲ. ಅಲ್ಲದೇ, ವೈದ್ಯರ ಕಾರ್ಯದ ಬಗ್ಗೆ ನಮಗೆ ತೃಪ್ತಿ ಇದೆ’ ಎಂದೂ ಹೇಳಿದರು. ‘ಎಸ್‌ಕೆಎಂಸಿ ಆಸ್ಪತ್ರೆಯಲ್ಲಿ ಅತ್ಯುತ್ತಮ ಚಿಕಿತ್ಸೆ ಸಿಗುವಂತೆ ಮಾಡಲು ಅಲ್ಪಾವಧಿ ಮತ್ತು ದೀರ್ಘಾವಧಿ ಕಾರ್ಯಕ್ರಮ ರೂಪಿಸುವಂತೆ ಮುಖ್ಯಮಂತ್ರಿ ನಿತೀಶ್‌ ಕುಮಾರ್ ನಿರ್ದೇಶನ ನೀಡಿದ್ದಾರೆ’ ಎಂದು ತಿಳಿಸಿದರು. ‘ಮುಂದಿನ ವರ್ಷ ಹೆಚ್ಚುವರಿ 900 ಹಾಸಿಗೆಗಳನ್ನು ಒದಗಿಸಲಾಗುವುದು. ನವಜಾತ ಶಿಶು ತೀವ್ರ ನಿಗಾ ಘಟಕದಲ್ಲಿ ಈಗ 50 ಹಾಸಿಗೆಗಳಿದ್ದು, ಇದನ್ನು 100 ಹಾಸಿಗೆಗೆ ಮೇಲ್ದರ್ಜೆಗೇರಿಸಲಾಗುವುದು’ ಎಂದು ವಿವರಿಸಿದರು.

‘ಚಿಕಿತ್ಸೆ: ಜನರು ದೂರಿಲ್ಲ..’

ಸಚಿವರ ವಿರುದ್ಧ ಪ್ರಕರಣ

ಬಿಹಾರದ ಮುಜಪ್ಫರ್‌ಪುರದಲ್ಲಿ ಶಂಕಿತ ಮಿದುಳಿನ ತೀವ್ರ ಉರಿಯೂತ ಕಾಯಿಲೆ(ಎಇಎಸ್‌) ಬಾಧಿಸಿ ಮಕ್ಕಳು ಸಾವನ್ನಪ್ಪುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಮತ್ತು ರಾಜ್ಯ ಆರೋಗ್ಯ ಸಚಿವ ಮಂಗಲ್‌ ಪಾಂಡೆಯ ವಿರುದ್ಧ ಸಾಮಾಜಿಕ ಕಾರ್ಯಕರ್ತೆ ತಮನ್ನಾ ಹಾಶ್ಮಿ ಎಂಬವರು ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಿದ್ದಾರೆ. ಮುಜಪ್ಫರ್‌ಪುರದ ಸಿಜೆಎಂ ನ್ಯಾಯಾಲಯ ಜೂನ್‌ 24 ರಂದು ಈ ಕುರಿತು ವಿಚಾರಣೆ ನಡೆಸಲಿದೆ.

’ಮೃತಪಟ್ಟಿರುವ ಮಕ್ಕಳಲ್ಲಿ ಹೆಚ್ಚಿನವರು ಕೆಳ ವರ್ಗಕ್ಕೆ ಸೇರಿದವರು. ಆರೋಗ್ಯ ಇಲಾಖೆಯ ನಿರ್ಲಕ್ಷ್ಯ ಹಾಗೂ ಸರ್ಕಾರಿ ಆಸ್ಪತ್ರೆಗಳಲ್ಲಿ ಮೂಲ ಸೌಕರ್ಯಗಳ ಕೊರತೆ ಸಾವಿನ ಸಂಖ್ಯೆ ಹೆಚ್ಚಾಗಲು ಕಾರಣ‘ ಎಂದು ತಮನ್ನಾ ದೂರಿನಲ್ಲಿ ಆರೋಪಿಸಿದ್ದಾರೆ.

ಈ ರೋಗಕ್ಕೆ ಈಗಾಗಲೇ 124 ಮಕ್ಕಳು ಬಲಿಯಾಗಿದ್ದು, ಮುಜಪ್ಫರ್‌ಪುರ ಮತ್ತು ಪಕ್ಕದ ಜಿಲ್ಲೆಗಳ 150ಕ್ಕೂ ಹೆಚ್ಚು ಮಕ್ಕಳು ಚಿಕಿತ್ಸೆ ಪಡೆಯುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT