ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಿಜಾಮುದ್ದೀನ್ ಮಸೀದಿ ಪ್ರಕರಣ: ಮೌಲಾನಾ ಸಾದ್ ವಿರುದ್ಧ ಎಫ್ಐಆರ್

Last Updated 31 ಮಾರ್ಚ್ 2020, 15:11 IST
ಅಕ್ಷರ ಗಾತ್ರ

ನವದೆಹಲಿ: ದೆಹಲಿ ನಿಜಾಮುದ್ದೀನ್ ಮರ್ಕಜ್ ಪ್ರಕರಣದ ತನಿಖೆಯನ್ನು ದೆಹಲಿ ಪೊಲೀಸರ ಅಪರಾಧ ದಳ ನಡೆಸಲಿದೆ.ಈಗಾಗಲೇ ದೆಹಲಿ ಪೊಲೀಸರು ಪಶ್ಚಿಮ ನಿಜಾಮುದ್ದೀನ್ ಪ್ರದೇಶದಲ್ಲಿ ತನಿಖೆ ಆರಂಭಿಸಿದ್ದಾರೆ.

ಮಸೀದಿಯಲ್ಲಿ ನಡೆದ ತಬ್ಲಿಗಿ ಜಮಾಅತ್ ಧಾರ್ಮಿಕ ಸಭೆಯಲ್ಲಿ ಭಾಗವಹಿಸಿದ ಹಲವರಿಗೆ ಕೊರೊನಾ ಸೋಂಕು ಲಕ್ಷಣಗಳು ಕಾಣಿಸಿಕೊಂಡಿದ್ದುಮರ್ಕಜ್ ಮುಖ್ಯಸ್ಥ ಮೌಲಾನಾ ಸಾದ್ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.ಮೌಲಾನಾ ಸಾದ್ ವಿರುದ್ಧ ಸಾಂಕ್ರಾಮಿಕ ರೋಗ ಕಾಯ್ದೆ 1987ನ ಸೆಕ್ಷನ್ 269, 270, 271 ಮತ್ತು ಐಪಿಸಿ ಸೆಕ್ಷನ್ 120-ಬಿ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ಈ ಹೊತ್ತಲ್ಲಿ ನಾವು ತಪ್ಪು ಹುಡುಕುವ ಬದಲು ರೋಗ ಹರಡಿರುವ ಜಾಗಗಳ ಬಗ್ಗೆ ಪತ್ತೆ ಹಚ್ಚಿ ಅದು ಮತ್ತಷ್ಟುಹರಡದಂತೆ ನೋಡಿಕೊಳ್ಳ ಬೇಕು ಎಂದು ಮಂಗಳವಾರ ಸುದ್ದಿಗೋಷ್ಠಿ ನಡೆಸಿದ ಆರೋಗ್ಯ ಸಚಿವಾಲಯದ ಜಂಟಿ ಕಾರ್ಯದರ್ಶಿ ಲವ್ ಅಗರವಾಲ್ ಹೇಳಿದ್ದರು.

ಇದನ್ನೂ ಓದಿ: ನಿಜಾಮುದ್ದೀನ್‌ ಮಸೀದಿ ಸಭೆಯಲ್ಲಿ ಭಾಗವಹಿಸಿದ್ದ 8 ಮಂದಿ ಬಿಜ್‌ನೋರ್‌ನಲ್ಲಿ ಪತ್ತೆ

ಧಾರ್ಮಿಕ ಸಭೆಯಲ್ಲಿ ಭಾಗಿಯಾದ 24 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ ಎಂದು ದೆಹಲಿ ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ಹೇಳಿದ್ದಾರೆ.ಧಾರ್ಮಿಕ ಸಭೆಯಲ್ಲಿ ಭಾಗವಹಿಸಿದ 700 ಮಂದಿಯನ್ನು ಕ್ವಾರಂಟೈನ್‌ನಲ್ಲಿರಿಸಲಾಗಿದೆ. ಈ ಪೈಕಿ335 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಜೈನ್ ಹೇಳಿದ್ದಾರೆ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT