ವಾರಾಣಸಿಯಿಂದ ಪ್ರಿಯಾಂಕಾ ಸ್ಪರ್ಧೆ ಇನ್ನೂ ನಿರ್ಧಾರವಾಗಿಲ್ಲ: ರಾಜೀವ್‌ ಶುಕ್ಲಾ

ಶುಕ್ರವಾರ, ಏಪ್ರಿಲ್ 26, 2019
36 °C

ವಾರಾಣಸಿಯಿಂದ ಪ್ರಿಯಾಂಕಾ ಸ್ಪರ್ಧೆ ಇನ್ನೂ ನಿರ್ಧಾರವಾಗಿಲ್ಲ: ರಾಜೀವ್‌ ಶುಕ್ಲಾ

Published:
Updated:
Prajavani

ನವದೆಹಲಿ: ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ವಾರಾಣಸಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಸ್ಪರ್ಧಿಸುವ ಕುರಿತಂತೆ ಈವರೆಗೆ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ಕಾಂಗ್ರೆಸ್‌ನ ಹಿರಿಯ ನಾಯಕ ರಾಜೀವ್‌ ಶುಕ್ಲಾ ಭಾನುವಾರ ಹೇಳಿದ್ದಾರೆ. 

ಕೆಲವು ದಿನಗಳ ಹಿಂದೆ ಸುದ್ದಿಗಾರರೊಂದಿಗೆ ಮಾತನಾಡಿದ್ದ ಪ್ರಿಯಾಂಕಾ ಗಾಂಧಿ, ಪ್ರಧಾನಿ ಮೋದಿಯವರನ್ನು ಅವರದೇ ಕ್ಷೇತ್ರದಲ್ಲಿ ಎದುರಿಸಲು ಯಾವುದೇ ಹಿಂಜರಿಕೆ ಇಲ್ಲ ಎಂದು ಹೇಳಿದ್ದರು. 

‘ಕಾರ್ಯಕರ್ತರು ಕೇಳಿದ್ದ ಪ್ರಶ್ನೆಗೆ ಪ್ರಿಯಾಂಕಾ ಹಾಗೆ ಉತ್ತರಿಸಿದ್ದರು. ಅದೇ ಮಾತನ್ನು ಈಗ ಅನವಶ್ಯಕವಾಗಿ ಈ ರೀತಿ ಹರಿಬಿಡಲಾಗುತ್ತಿದೆ. ಆದರೆ, ಈ ಬಗ್ಗೆ ಪ್ರಿಯಾಂಕಾ ಯಾವುದೇ ನಿರ್ಧಾರ ಕೈಗೊಂಡಿಲ್ಲ’ ಎಂದು ಶುಕ್ಲಾ ಸ್ಪಷ್ಟಪಡಿಸಿದ್ದಾರೆ. 

‘ಕಳೆದ 20 ವರ್ಷಗಳಲ್ಲಿ ಉತ್ತರಪ್ರದೇಶದಲ್ಲಿ ಕಾಂಗ್ರೆಸ್‌ ತೀರಾ ದುರ್ಬಲವಾಗಿತ್ತು. ಆದರೆ, 2022ರ ವೇಳೆಗೆ ಪ್ರಿಯಾಂಕಾ ನಾಯಕತ್ವದಲ್ಲಿ ಕಾಂಗ್ರೆಸ್ ಉತ್ತರ ಪ್ರದೇಶದಲ್ಲಿ ಬಲಿಷ್ಠಗೊಳ್ಳಲಿದೆ’ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಬರಹ ಇಷ್ಟವಾಯಿತೆ?

 • 1

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !