ಗುರುವಾರ , ಆಗಸ್ಟ್ 5, 2021
28 °C

ಕೋವಿಡ್‌-19: ಅಧಿಕಾರಿಗಳಿಗೆ ವಿದೇಶದಲ್ಲಿ ತರಬೇತಿ ಇಲ್ಲ– ಕೇಂದ್ರ

ಪಿಟಿಐ Updated:

ಅಕ್ಷರ ಗಾತ್ರ : | |

ಸರ್ಕಾರದ ಅಧಿಕಾರಿಗಳು– ಸಾಂದರ್ಭಿಕ ಚಿತ್ರ

ನವದೆಹಲಿ: ಕೋವಿಡ್‌–19 ಪಿಡುಗಿನ ಹಿನ್ನೆಲೆಯಲ್ಲಿ ಈ ಹಣಕಾಸು ವರ್ಷ ಅಧಿಕಾರಿಗಳನ್ನು ತರಬೇತಿಗಾಗಿ ವಿದೇಶಗಳಿಗೆ ಕಳುಹಿಸದಿರಲು ಕೇಂದ್ರ ಸರ್ಕಾರ ನಿರ್ಧರಿಸಿದೆ.

‘ಸುರಕ್ಷತೆ ಹಾಗೂ ಮಿತವ್ಯಯ ಕಾಪಾಡುವ ಕಾರಣ ಈ ನಿರ್ಧಾರವನ್ನು ಕೈಗೊಳ್ಳಲಾಗಿದೆ’ ಎಂದು ಸಿಬ್ಬಂದಿ ಸಚಿವಾಲಯ ಬುಧವಾರ ತಿಳಿಸಿದೆ.

ಸಿಬ್ಬಂದಿ ಮತ್ತು ತರಬೇತಿ ಇಲಾಖೆ, ಕೇಂದ್ರೀಯ ತರಬೇತಿ ಸಂಸ್ಥೆಗಳು ಅಧಿಕಾರಿಗಳಿಗೆ ವಿದೇಶದಲ್ಲಿ ತರಬೇತಿ ನೀಡುವ ಇಲ್ಲವೇ ವಿದೇಶಿ ತಜ್ಞರನ್ನು ಆಹ್ವಾನಿಸಿ, ಸಂಸ್ಥೆಯಲ್ಲಿಯೇ ತರಬೇತಿ ಒದಗಿಸುವ ಕಾರ್ಯ ಮಾಡುತ್ತವೆ.

ವಿದೇಶಗಳಲ್ಲಿ ಅಧಿಕಾರಿಗಳಿಗೆ ತರಬೇತಿ ನೀಡುವ ಕಾರ್ಯಕ್ರಮಕ್ಕಾಗಿ ಪ್ರಸಕ್ತ ಬಜೆಟ್‌ನಲ್ಲಿ ₹238.45 ಕೋಟಿ ತೆಗೆದಿರಿಸಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು