ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

23 ವಿಶ್ವವಿದ್ಯಾಲಯಗಳಿಗೆ ಮಾನ್ಯತೆ ಇಲ್ಲ: ಯುಜಿಸಿ

Last Updated 23 ಜುಲೈ 2019, 18:33 IST
ಅಕ್ಷರ ಗಾತ್ರ

ನವದೆಹಲಿ: ದೇಶದಲ್ಲಿನ 23 ನಕಲಿ ವಿಶ್ವವಿದ್ಯಾಲಯಗಳ ಪಟ್ಟಿಯನ್ನು ವಿಶ್ವವಿದ್ಯಾಲಯ ಅನುದಾನ ಆಯೋಗ (ಯುಜಿಸಿ) ಬಿಡುಗಡೆ ಮಾಡಿದ್ದು, ಈ ವಿಶ್ವವಿದ್ಯಾಲಯಗಳಲ್ಲಿ ಪ್ರವೇಶ ಪಡೆಯದಂತೆ ವಿದ್ಯಾರ್ಥಿಗಳಿಗೆ ಎಚ್ಚರಿಕೆ ನೀಡಿದೆ.

ಬೆಳಗಾವಿ ಜಿಲ್ಲೆಯ ‘ಬಡಗಾನ್ವಿ ಸರ್ಕಾರ್ ವರ್ಲ್ಡ್ ಓಪನ್ ಯುನಿವರ್ಸಿಟಿ ಎಜುಕೇಶನ್ ಸೊಸೈಟಿ’ ಹೆಸರು ನಕಲಿ ವಿಶ್ವವಿದ್ಯಾಲಯಗಳ ಪಟ್ಟಿಯಲ್ಲಿದೆ.

ಇವು ’ಸ್ವಯಂ ಘೋಷಿತ ಮತ್ತು ಮಾನ್ಯತೆ ಪಡೆಯದ’ ವಿಶ್ವವಿದ್ಯಾಲಯಗಳಾಗಿವೆ. ಇವುಗಳಲ್ಲಿ ಅತಿ ಹೆಚ್ಚು ಉತ್ತರ ಪ್ರದೇಶದಲ್ಲಿವೆ. ಎಂಟು ವಿಶ್ವವಿದ್ಯಾಲಯಗಳು ಈ ರಾಜ್ಯದಲ್ಲಿವೆ.

ದೆಹಲಿಯಲ್ಲಿ ಏಳು,ಪಶ್ಚಿಮ ಬಂಗಾಳ ಮತ್ತು ಒಡಿಶಾದಲ್ಲಿ ತಲಾ ಎರಡು, ಕೇರಳ, ಕರ್ನಾಟಕ, ಮಹಾರಾಷ್ಟ್ರ ಮತ್ತು ಪುದುಚೇರಿಯಲ್ಲಿ ತಲಾ ಒಂದು ನಕಲಿ ವಿಶ್ವವಿದ್ಯಾಲಯಗಳಿವೆ ಎಂದು ಯುಜಿಸಿ ಕಾರ್ಯದರ್ಶಿ ರಜನೀಶ್‌ ಜೈನ್‌ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT