ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೋದಿ–ಇಮ್ರಾನ್ ದ್ವಿಪಕ್ಷೀಯ ಸಭೆ ಇಲ್ಲ: ವಿದೇಶಾಂಗ ಸಚಿವಾಲಯ

ಶಾಂಘೈ ಸಹಕಾರ ಸಂಘಟನೆ ಶೃಂಗಸಭೆ
Last Updated 6 ಜೂನ್ 2019, 14:12 IST
ಅಕ್ಷರ ಗಾತ್ರ

ನವದೆಹಲಿ: ಶಾಂಘೈ ಸಹಕಾರ ಸಂಘಟನೆ (ಎಸ್‌ಸಿಒ) ಶೃಂಗಸಭೆ ವೇಳೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ನಡುವೆ ದ್ವಿಪಕ್ಷೀಯ ಸಭೆ ಆಯೋಜಿಸಿಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರವೀಶ್ ಕುಮಾರ್ ತಿಳಿಸಿದ್ದಾರೆ.

ಕಿರ್ಗಿಸ್ತಾನದ ರಾಜಧಾನಿ ಬಿಶ್ಕೆಕ್‌ನಲ್ಲಿ ಜೂನ್ 13 ಮತ್ತು 14ರಂದು ನಡೆಯಲಿರುವ ಎಸ್‌ಸಿಒ ಶೃಂಗಸಭೆಯಲ್ಲಿ ಮೋದಿ ಪಾಲ್ಗೊಳ್ಳಲಿದ್ದಾರೆ ಎಂದು ಅವರು ಹೇಳಿದ್ದಾರೆ.

ಇದೇ ತಿಂಗಳ 8 ಮತ್ತು 9 ರಂದು ಶ್ರೀಲಂಕಾ ಮತ್ತು ಮಾಲ್ಡೀವ್ಸ್‌‌ಗೂ ಮೋದಿ ಭೇಟಿ ನೀಡಲಿದ್ದು, ಜೂನ್ 8ರಂದು ಮಾಲ್ಡೀವ್ಸ್‌‌ನಸಂಸತ್ತನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT