ಮಂಗಳವಾರ, ಏಪ್ರಿಲ್ 7, 2020
19 °C

ದೆಹಲಿಯಲ್ಲಿ ಲಾಕ್‌ಡೌನ್‌ ಪರಿಣಾಮ: 24 ಗಂಟೆಗಳಲ್ಲಿ ವರದಿಯಾಗದ ಹೊಸ ಸೋಂಕು ಪ್ರಕರಣ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಸೋಮವಾರದಿಂದ ಮಂಗಳವಾರದ ವರೆಗೆ ಒಂದೇ ಒಂದು ಹೊಸ ಕೊರೊನಾ ವೈರಸ್‌ ಸೋಂಕು ಪ್ರಕರಣ ವರದಿಯಾಗಿಲ್ಲ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ. 

ಕೊರೊನಾ ವೈರಸ್‌ ಸೋಂಕು ವ್ಯಾಪಿಸುತ್ತಿದ್ದ ಹಿನ್ನೆಲೆಯಲ್ಲಿ ದೆಹಲಿ ಸರ್ಕಾರ ಭಾನುವಾರ ರಾತ್ರಿಯಿಂದಲೇ ಲಾಕ್‌ ಡೌನ್‌ ಘೋಷಣೆ ಮಾಡಿದೆ. ಲಾಕ್‌ಡೌನ್‌ ಘೋಷಣೆಯಾಗುವುದಕ್ಕೂ ಮೊದಲು 31 ಇದ್ದ ಸೋಂಕು ಪ್ರಕರಣ, ಲಾಕ್‌ ಡೌನ್‌ ಆಗಿ 24 ಗಂಟೆ ಕಳೆದರೂ 31ರಲ್ಲೇ ಇದೆ. 

ಈ ಪೈಕಿ ಆರು ಮಂದಿ ಈಗಾಗಲೇ ಗುಣಮುಖರಾಗಿದ್ದು, ಅವರು ಬಿಡುಗಡೆಯಾಗಿದ್ದಾರೆ. 11 ಇಟಲಿ ಪ್ರವಾಸಿಗರನ್ನು ಗುರುಗ್ರಾಮದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರೂ ಗುಣವಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು