ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೋದಿ ಭೇಟಿ ಬಳಿಕ ಸಿಎಎಗೆ ಉದ್ಧವ್‌ ಬೆಂಬಲ

Last Updated 21 ಫೆಬ್ರುವರಿ 2020, 21:10 IST
ಅಕ್ಷರ ಗಾತ್ರ

ನವದೆಹಲಿ: ‘ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಹಾಗೂ ರಾಷ್ಟ್ರೀಯ ಪೌರತ್ವ ನೋಂದಣಿ (ಎನ್‌ಆರ್‌ಸಿ) ಕುರಿತು ಯಾರೂ ಭಯಪಡುವ ಅಗತ್ಯ ಇಲ್ಲ’ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್‌ ಠಾಕ್ರೆ ಶುಕ್ರವಾರ ಹೇಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾದ ನಂತರ ಠಾಕ್ರೆ ಈ ಹೇಳಿಕೆ ನೀಡಿದ್ದಾರೆ.

‘ಸಿಎಎ ಮತ್ತು ಎನ್‌ಆರ್‌ಸಿ ಜಾರಿಗೊಳಿಸುವುದರಿಂದ ದೇಶದಿಂದಯಾರನ್ನೂ ಹೊರದಬ್ಬುವುದಿಲ್ಲ’ ಎಂದು ತಿಳಿಸಿದರು.

ಸಿಎಎ ಮತ್ತು ಎನ್‌ಆರ್‌ಸಿ ಕುರಿತು ಮಿತ್ರ ಪಕ್ಷಗಳಾದ ಎನ್‌ಸಿಪಿ ಮತ್ತು ಕಾಂಗ್ರೆಸ್‌ ವಿರೋಧ ವ್ಯಕ್ತಪಡಿಸಿರುವ ಕುರಿತು ಪ್ರತಿಕ್ರಿಯಿಸಿದ ಅವರು, ‘ಮಹಾ ಅಘಾಡಿ’ಯಲ್ಲಿ ಯಾವುದೇ ಭಿನ್ನಾಭಿಪ್ರಾಯಗಳು ಇಲ್ಲ. ಸರ್ಕಾರವು ಐದು ವರ್ಷ ಪೂರ್ಣಗೊಳಿಸಲಿದೆ’ ಎಂದು ಉತ್ತರಿಸಿದರು.

ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಇದೇ ಮೊದಲ ಬಾರಿ ಠಾಕ್ರೆ ಪ್ರಧಾನಿ ಮೋದಿ ಅವರನ್ನು ಭೇಟಿಯಾದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT